ಕಾಂಗ್ರೆಸ್‌ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ: ಸುನಿಲ್‌ ಕುಮಾರ್‌

| Published : Jan 10 2025, 12:49 AM IST

ಕಾಂಗ್ರೆಸ್‌ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ: ಸುನಿಲ್‌ ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಛ ಕೊಟ್ಟು ಸ್ವಾಗತಿಸಿ, ಸಮೋಸಾ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.ಅಮಾಯಕರಿಗೆ ಕ್ಷಮಾದಾನ ನೀಡಲೇಬಾರದು ಎಂಬುದು ನಮ್ಮ ವಾದವಲ್ಲ, ಆದರೆ ಶರಣಾದ ರೀತಿ, ಪ್ಯಾಕೇಜ್ ಘೋಷಣೆ ವಿಧಾನ, ಪ್ರಕರಣ ರದ್ಧತಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಆಕ್ಷೇಪವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಒಂದೆಡೆ ನಕ್ಸಲ್ ಶರಣಾಗತಿ ಬಗ್ಗೆ ಮಾತನಾಡುವ ಸರ್ಕಾರ, ಅರಣ್ಯ ವಾಸಿಗಳಿಗ ಪುನರ್ಸತಿ ಬಗ್ಗೆ ಯಾವ ನಿಲುವು ಹೊಂದಿದೆ ಎಂಬುದನ್ನೂ ಸ್ಪಷ್ಟಪಡಿಸಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ ಕುಮಾರ್, ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.