ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ

| Published : Sep 09 2025, 01:01 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ

ಶಿರಸಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.ಹೇಳಿಕೆಯಲ್ಲಿ ತಿಳಿಸಿರುವ ಅವರು, ಸರ್ಕಾರದ ನಡವಳಿಕೆಯು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಇದಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಘಟನೆಯೇ ಸ್ಪಷ್ಟ ಉದಾಹರಣೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದು ದಾಂಧಲೆ ನಡೆಸಿದ್ದಲ್ಲದೆ, ಈ ಘಟನೆಯನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಹಿಂದೂ ಕಾರ್ಯಕರ್ತರು ಮತ್ತು ಮಹಿಳೆಯರ ಮೇಲೆ ಸರ್ಕಾರ ಲಾಠಿಚಾರ್ಜ್ ಮಾಡಿಸಿರುವುದು ಖಂಡನೀಯ ಎಂದರು.

ಕಳೆದ ವರ್ಷವೂ ಮಂಡ್ಯದ ನಾಗಮಂಗಲದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿ ಹಿಂದೂಗಳ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ, ಹಿಂದೂ ಯುವಕರ ಮೇಲೆ ಕಿರುಕುಳ ನೀಡಿತ್ತು. ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಂಧಲೆ, ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ ಗಲಭೆಯ ಆರೋಪಿತರ ಮೇಲಿದ್ದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದದ್ದು ಮುಸ್ಲಿಂ ಓಲೈಕೆ ಮನಸ್ಥಿತಿ ಹೆಚ್ಚಿದೆ ಎಂದರು.