ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ: ಇಬ್ಬನಿ ಭರತ್ ಬೊಮ್ಮಾಯಿ

| Published : Nov 06 2024, 11:52 PM IST

ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ: ಇಬ್ಬನಿ ಭರತ್ ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿಗಳು ತಾತ್ಕಾಲಿಕ, ಅವರು ಅಧಿಕಾರಕ್ಕೆ ಬರುವ ತನಕ ಮಾತ್ರ ಗ್ಯಾರಂಟಿ. ಬಸವರಾಜ ಬೊಮ್ಮಾಯಿ ಮಾಡಿರುವುದು ಶಾಶ್ವತ ಗ್ಯಾರಂಟಿ ಎಂದು ಇಬ್ಬನಿ ಭರತ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿ: ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ, ಬಿಜೆಪಿ ಸರ್ಕಾರ ಅಂದರೆ ಅಭಿವೃದ್ಧಿ ಸರ್ಕಾರ ಎಂದು ಶಿಗ್ಗಾಂವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ಪತ್ನಿ ಇಬ್ಬನಿ ಭರತ್ ಬೊಮ್ಮಾಯಿ ಹೇಳಿದರು.

ತಾಲೂಕಿನ ಖುರ್ಸಾಪುರ ಗ್ರಾಮದಲ್ಲಿ ಭರತ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಗರಣ ನಿಶ್ಚಿತ, ಖಚಿತ, ಶಾಶ್ವತ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ನಿಶ್ಚಿತ. ಶಾಶ್ವತ, ಖಚಿತ ಎಂದು ಹೇಳಿದರು.

ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿಗಳು ತಾತ್ಕಾಲಿಕ, ಅವರು ಅಧಿಕಾರಕ್ಕೆ ಬರುವ ತನಕ ಮಾತ್ರ ಗ್ಯಾರಂಟಿ. ಬಸವರಾಜ ಬೊಮ್ಮಾಯಿ ಮಾಡಿರುವುದು ಶಾಶ್ವತ ಗ್ಯಾರಂಟಿ. ಅವರು ಮನೆಗಳನ್ನು ಕಟ್ಟಿದ್ದಾರೆ. ಸಿಸಿ ರಸ್ತೆ ಮಾಡಿದ್ದಾರೆ. ಎಲ್ಲರಿಗೂ ಉದ್ಯೋಗ ಕೊಟ್ಟಿದ್ದಾರೆ. ಎಲ್ಲವೂ ಶಾಶ್ವತ ಗ್ಯಾರಂಟಿ ಕೊಟ್ಟಿದ್ದಾರೆ. ಅವರು ಈ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿಯನ್ನು ಭರತ್ ಬೊಮ್ಮಾಯಿ ಮುಂದುವರಿಸಿಕೊಂಡು ಹೋಗುತ್ತಾರೆ. ನಮ್ಮ ಮಾವನವರು ಅಭಿವೃದ್ಧಿ ಬಗ್ಗೆ ಕಂಡ ಕನಸು ನನಸು ಮಾಡುತ್ತಾರೆ. ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿ ಮುಂದುವರಿಸಲು ಎಲ್ಲರೂ ಒಗ್ಗಟ್ಟಾಗಿ ಭರತ್ ಬೊಮ್ಮಾಯಿ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಅಭಿವೃದ್ಧಿ ಕಾರ್ಯ ಮುಂದುವರಿಯಬೇಕೆಂಬ ಉದ್ದೇಶದಿಂದ ಭರತ್ ಸ್ಪರ್ಧೆ

ಶಿಗ್ಗಾಂವಿ: ಮಾಜಿ ಮುಖ್ಯಮಂತ್ರಿ, ಸಂಸದರಾದ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕೆಲಸಗಳು ಇನ್ನೂ ಮುಂದುವರಿಯಬೇಕೆಂಬ ಉದ್ದೇಶದಿಂದ ಉಪಚುನಾವಣೆಗೆ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದು ಚೆನ್ನಮ್ಮ ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ಪುತ್ರ ಹಾಗೂ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಚುನಾವಣೆ ಪ್ರಚಾರ ನಡೆಸಿ ಮಹಿಳಾ ಮತದಾರರನ್ನುದ್ದೇಶಿಸಿ ಮಾತನಾಡಿದರು.

ಕ್ಷೇತ್ರದಲ್ಲಿ ಟೆಕ್ಸ್‌ಟೈಲ್ಸ್ ಹಾಗೂ ಗಾರ್ಮೆಂಟ್ಸ್ ಸೇರಿದಂತೆ ಇನ್ನಿತರ ಉದ್ದಿಮೆಗಳು ಬರಲು ಭರತ್ ಬೊಮ್ಮಾಯಿ ಕಾರಣರಾಗಿದ್ದಾರೆ. ಅವರೇ ಇಲ್ಲಿನ ಮಹಿಳೆಯರು ಅಭಿವೃದ್ಧಿಯಾಗಬೇಕೆಂದು ಓಡಾಡಿ ಕೆಲಸ ಮಾಡಿದ್ದಾರೆ. ರಸ್ತೆ ಅಭಿವೃದ್ಧಿ, ಮನೆ ಮನೆಗೆ ಕುಡಿಯುವ ನೀರು, ಮಹಿಳೆಯರಿಗೆ ಉದ್ಯೋಗ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. 2008ಕ್ಕಿಂತ ಮೊದಲಿದ್ದ ಶಿಗ್ಗಾಂವಿ ಈಗಿಲ್ಲ. ಬಸವರಾಜ ಬೊಮ್ಮಾಯಿ ಈಗ ಸಂಸದಾಗಿದ್ದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ನಿಲ್ಲಬಾರದೆಂಬ ಉದ್ದೇಶವಿದೆ. ತಂದೆಯ ಕೈಹಿಡಿದಂತೆ ಈಗ ಮಹಿಳೆಯರು ಸೇರಿದಂತೆ ಎಲ್ಲರೂ ಮಗ ಭರತ್ ಕೈಹಿಡಿಯಬೇಕು ಎಂದು ಮನವಿ ಮಾಡಿದರು.