ಜನಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧ

| Published : Oct 08 2023, 12:00 AM IST

ಸಾರಾಂಶ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ. ರಾಜ್ಯದ ಜನತೆ ನಮ್ಮ ಮೇಲೆ ವಿಶ್ವಾಸ ಇಟ್ಟು ನಮಗೆ ಸ್ಪಷ್ಟ ಬಹುಮತ ನೀಡಿ ಆಶೀರ್ವಾದ ಮಾಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಸದಾ ಬದ್ಧ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ಕೊಪ್ಪಳ:

ತಾಲೂಕಿನ ಗೊಂಡಬಾಳ ಜಿಪಂ ಕ್ಷೇತ್ರ ವ್ಯಾಪ್ತಿಯ ಹಾಲವರ್ತಿ, ಕುಣಿಕೇರಿ ತಾಂಡಾ, ಕುಣಿಕೇರಿ, ಲಾಚನಕೇರಿ, ಕರ್ಕಿಹಳ್ಳಿ, ಚಿಕ್ಕಬಗನಾಳ, ಹಿರೇಬಗನಾಳ, ಕಾಸನಕಂಡಿ, ಅಲ್ಲಾನಗರ ಗ್ರಾಮಗಳಲ್ಲಿ ಜನಸಂಪರ್ಕ ಹಾಗೂ ಅಭಿನಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನಮ್ಮ ಕ್ಷೇತ್ರಕ್ಕೆ ₹85 ಕೋಟಿ ಅನುದಾನ ಬಂದಿದ್ದು, ಕ್ಷೇತ್ರ 104 ಗ್ರಾಮಗಳಿಗೂ ಸರಿಸಮನಾಗಿ ಹಂಚಿಕೆ ಮಾಡಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಇದ್ದು ಕೆಲಸ ಮಾಡಿಸಿಕೊಳ್ಳಿ ಎಂದು ಕರೆ ನೀಡಿದರು.ಕೊಪ್ಪಳ ನಗರದ ಬಸವೇಶ್ವರ ವೃತ್ತದ ಬಳಿ ಪಿಎಲ್ ಡಿ ಬ್ಯಾಂಕ್ ವಾಣಿಜ್ಯ ಸಂಕೀರ್ಣ ಕಟ್ಟಡದ ಭೂಮಿಪೂಜೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ನೆರವೇರಿಸಿದರು.ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಗೂಳಪ್ಪ ಹಲಿಗೇರಿ, ಹಾಲವರ್ತಿ ಗ್ರಾಪಂ ಅಧ್ಯಕ್ಷೆ ಜಯಪ್ರಭಾ ಭರಮಣ್ಣ ಗೊರವರ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಗಾಳೆಪ್ಪ ಪೂಜಾರ್ ದದೇಗಲ್, ತಹಸೀಲ್ದಾರ್ ವಿಠ್ಠಲ್ ಚೌಗಲೆ, ತಾಪಂ ಇಒ ಡುಂದೇಶ ತುರಾದಿ, ಮುಖಂಡರಾದ ರಾಮಣ್ಣ ಕಲ್ಲನವರ್, ಹನುಮಂತ ಕಿಡದಾಳ, ಹೇಮಣ್ಣ ದೇವರಮನಿ, ಬಸಣ್ಣ ಬಂಗಾಳಿ, ಜಗದೀಶ್ ಕರ್ಕಿಹಳ್ಳಿ, ಕುಮಾರ ಮಜ್ಜಿಗಿ, ಹನಮೇಶ ಹೊಸಳ್ಳಿ, ಆನಂದ ಕಿನ್ನಾಳ, ವಿರುಪಣ್ಣ ಕುಣಿಕೇರಿ, ಮಹೇಶ ಕುಣಿಕೇರಿ, ಕಾಳಪ್ಪ ತಾಂಡಾ, ಜ್ಯೋತಿ ಗೊಂಡಬಾಳ, ಸೌಭಾಗ್ಯಲಕ್ಷ್ಮಿ, ಕಾವೇರಿ ಭಾಗ್ಯನಗರ, ಪದ್ಮಾವತಿ ಕಂಬಳಿ, ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಅಕ್ಬರ್ ಪಲ್ಟಾನ ಉಪಸ್ಥಿತರಿದ್ದರು.