ಕಾಂಗ್ರೆಸ್ ಸರ್ಕಾರ ರೈತರ ಆಸ್ತಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲು ಹೊರಟಿದೆ: ಬಲ್ಲಾಹುಣ್ಸಿ ರಾಮಣ್ಣ ಬೇಸರ

| Published : Nov 05 2024, 12:43 AM IST

ಕಾಂಗ್ರೆಸ್ ಸರ್ಕಾರ ರೈತರ ಆಸ್ತಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲು ಹೊರಟಿದೆ: ಬಲ್ಲಾಹುಣ್ಸಿ ರಾಮಣ್ಣ ಬೇಸರ
Share this Article
  • FB
  • TW
  • Linkdin
  • Email

ಸಾರಾಂಶ

ಯಾವುದೋ ಒಂದು ಧರ್ಮ ಓಲೈಸುವ ನೆಪದಲ್ಲಿ ರಾಜ್ಯದಲ್ಲಿ ಅಶಾಂತಿಯುಂಟು ಮಾಡುವುದು ಸರಿಯಲ್ಲ.

ಹಗರಿಬೊಮ್ಮನಹಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ವಿವಿಧ ಜಿಲ್ಲೆಗಳಲ್ಲಿನ ರೈತರ ಭೂಮಿಯನ್ನು ವಕ್ಫ್‌ ಬೋರ್ಡ್ ನೀಡಲು ಹೊರಟಿರುವ ಅನ್ಯಾಯವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಕುರಿತು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈಬಿಡಬೇಕು. ಯಾವುದೋ ಒಂದು ಧರ್ಮ ಓಲೈಸುವ ನೆಪದಲ್ಲಿ ರಾಜ್ಯದಲ್ಲಿ ಅಶಾಂತಿಯುಂಟು ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೇವಲ ಮತಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನುಡಿದ ಭವಿಷ್ಯದಂತೆ ರಾಜ್ಯದಲ್ಲಿ ಕಾಂಗ್ರೆಸ್ ರೈತರ ಆಸ್ತಿಯನ್ನು ವಶಪಡಿಸಿಕೊಂಡು ವಕ್ಫ್‌ ಬೋರ್ಡ್‌ಗೆ ನೀಡುವ ಮೂಲಕ ಅಲ್ಪಸಂಖ್ಯಾರ ತುಷ್ಠೀಕರಣ ನಡೆಸಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಸಿಎಂ ಸಿದ್ದರಾಮಯ್ಯ, ಅವರ ಸಚಿವ ಸಂಪುಟ ರಾಜ್ಯದ ಪ್ರಗತಿ ಮರೆತು, ಜಾತಿ ಜಾತಿಗಳ ನಡುವೆ ವೈಷಮ್ಯ ಬಿತ್ತುತ್ತಿದ್ದಾರೆ ಎಂದು ಹರಿಹಾಯ್ದರು.

ತಹಶೀಲ್ದಾರ್ ಆರ್.ಕವಿತಾಗೆ ಮನವಿ ಸಲ್ಲಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಬೆಣ್ಣಿಕಲ್ಲು ಕೆ.ಎಸ್.ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಭದ್ರವಾಡಿ ಚಂದ್ರಶೇಖರ, ಪುರಸಭೆ ಸದಸ್ಯರಾದ ನವೀನಕುಮಾರ್, ಜೋಗಿ ಹನುಮಂತಪ್ಪ, ಮಾಜಿ ಸದಸ್ಯ ಕನಕಪ್ಪ, ಮಂಡಲ ಮಾಜಿ ಅಧ್ಯಕ್ಷ ಎಸ್.ಎಂ. ವೀರೇಶ್ವರಸ್ವಾಮಿ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಾದ ಮುಟುಗನಹಳ್ಳಿ ಕೊಟ್ರೇಶ, ಎಸ್.ಕೃಷ್ಣನಾಯ್ಕ, ಅನಿಲ್ ಜಾಣ, ಬಿ.ಬಸವರಾಜ, ಕೋಗಳಿ ಹನುಮಂತಪ್ಪ, ಸಾಲ್ಮನಿ ನಾಗರಾಜ, ಮರಿಯಪ್ಪ, ಮಡಿವಾಳರ ಅಶೋಕ್ ಇದ್ದರು. ೪ಎಚ್‌ಬಿಎಚ್೧

ಹಗರಿಬೊಮ್ಮನಹಳ್ಳಿ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಕಾಂಗ್ರೆಸ್ ಸರ್ಕಾರ ವಕ್ಫ್‌ ಬೋರ್ಡ್ ನೆಪದಲ್ಲಿ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.