ಸಾರಾಂಶ
ಕನ್ನಡಪ್ರಭವಾರ್ತೆ ನಾಗಮಂಗಲ
ಕಾಂಗ್ರೆಸ್ ಸರ್ಕಾರ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ವಿಶ್ವಾಸ ವ್ಯಕ್ತಪಡಿಸಿದರು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲೂಕಿನ ಹರದನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 3 ಲಕ್ಷ ರು.ವೆಚ್ಚದಲ್ಲಿ ಹೇಮಾವತಿ ನಾಲಾ ಸ್ವಚ್ಛತಾ ಕಾಮಗಾರಿ ನಡೆಸುತ್ತಿರುವ ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ವಿತರಿಸಿ ಸರ್ಕಾರದ ಸಾಧನೆ ಕುರಿತು ಮಾತನಾಡಿದರು.
ನಾಡಿನ ಎಲ್ಲ ವರ್ಗಗಳ ಜನರ ಶ್ರೇಯೋಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಬಹಳಷ್ಟು ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಮಾದರಿ ಆಡಳಿತ ನೀಡುತ್ತಿದೆ ಎಂದರು.ಪಂಚ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ದೇಶದಲ್ಲಿ ನರೇಗಾ ಯೋಜನೆ ಅನುಷ್ಠಾನಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ರಾಷ್ಟ್ರದ ಲಕ್ಷಾಂತರ ಬಡ ಕುಟುಂಬಗಳು ಶಾಂತಿ ನೆಮ್ಮದಿಯ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತಿದೆ ಎಂದರು.ರಾಜ್ಯದ ಅಭಿವೃದ್ಧಿಗೂ ಅದ್ಯತೆ ಕೊಟ್ಟು ಗ್ರಾಮೀಣ ಪ್ರದೇಶದ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಇಡೀ ದೇಶದಲ್ಲಿಯೇ ಮಾದರಿ ಆಡಳಿತ ನೀಡುತ್ತಿದೆ. ತಾಲೂಕಿನ ಜನರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದರು.
ಮೇ 26 ರಂದು ಗ್ರಾಮ, ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆಮಂಡ್ಯ: ತಾಲೂಕಿನ ಬಸರಾಳು ಹೋಬಳಿಯ ಚಂದಗಾಲು(ಬ) ಗ್ರಾಮ ಪಂಚಾಯ್ತಿ ಕಾರ್ಯಾಲಯ ವತಿಯಿಂದ ಮೇ 26 ರಂದು 2025-26 ನೇ ಸಾಲಿನ ಗ್ರಾಮ ಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯಯನ್ನು ಗ್ರಾಪಂ ಆವರಣದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಗ್ರಾಮ ಸಭೆ ಮತ್ತು 12 ಗಂಟೆಗೆ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಜರುಗಲಿದೆ ಎಂದು ಚಂದಗಾಲು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.