ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ. ಪೆಟ್ರೋಲ್, ಡಿಸೇಲ್ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.ನಗರದಲ್ಲಿ ಮತದಾರರಿಗೆ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಶಾಸಕರಿಗೆ ಒಂದು ರು. ಅನುದಾನ ಬಿಡುಗಡೆ ಮಾಡಿಲ್ಲ. ಇಬ್ಬರು ಸಚಿವರು ಕೂಡ ಒಂದು ರು. ತಂದಿಲ್ಲ. ಸೋಮಣ್ಣಗೆ ಎಲ್ಲವನ್ನು ನಿಭಾಯಿಸುವ ಶಕ್ತಿ ಇದೆ. ಮುಂದೆ ಸೋಮಣ್ಣ ಮುಖ್ಯಮಂತ್ರಿಯಾಗುವವರು ಎಂದು ಭವಿಷ್ಯ ನುಡಿದರು.ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕೆಲಸ ಸೋಮಣ್ಣ ಮಾಡಬೇಕು. ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಜಿಲ್ಲೆಯ ಜನರಿಗೆ ನೀರು ಕೊಡಬೇಕು. ರಾಮನಗರ ಜಿಲ್ಲೆಗೆ ಪೈಪ್‌ಗಳಲ್ಲಿ ಹೇಮಾವತಿ ನೀರು ತೆಗೆದುಕೊಂಡುಹೋಗುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಬೇಕು. ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ೫ ಸಾವಿರ ಕೋಟಿ ರೂ. ಅನುದಾನ ಕೊಡಿಸುವ ಕೆಲಸ ಮಾಡಬೇಕು, ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ಒಂದು ಲಕ್ಷ ಜನರಿಗೆ ಉದ್ಯೋಗ ದೊರಕಿಸುವ ಪ್ರಯತ್ನ ಮಾಡಬೇಕು ಎಂದು ಸಚಿವ ಸೋಮಣ್ಣರಿಗೆ ಮನವಿ ಮಾಡಿದರು.