ಸಾರಾಂಶ
ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಪುತ್ತೂರು
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕೇವಲ ಗ್ಯಾರಂಟಿ ಭಜನೆಯನ್ನು ಬಿಟ್ಟರೆ ಇತರ ಯಾವುದೇ ಹೇಳಿಕೊಳ್ಳುವ ಕೆಲಸ ಮಾಡಿಲ್ಲ. ಸರ್ಕಾರದ ವೈಫಲ್ಯದ ವಿರುದ್ದ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರು ಉತ್ತಮ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಜಿಲ್ಲಾ ಸಂಚಾಲಕ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ವಿಧಾನ ಪರಿಷತ್ ಎಂಬುದು ಚಿಂತಕರನ್ನು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಚುನಾವಣಾ ಪೂರ್ವದಲ್ಲಿ ಅಂದರೆ ೧೯೦೭ರಲ್ಲಿಯೇ ಇದ್ದಂತಹ ವ್ಯವಸ್ಥೆಯಿದು. ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ವಿಧಾನ ಪರಿಷತ್ ಚುನಾವಣಾ ಸಹ ಸಂಚಾಲಕ ವಿಕಾಸ್ ಪುತ್ತೂರು, ಮುಖಂಡರಾದ ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್ ಇದ್ದರು.