ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳು 10 ವರ್ಷದ ವಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್‌

| Published : Mar 27 2024, 01:02 AM IST

ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳು 10 ವರ್ಷದ ವಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆ ಪೂರ್ವದಲ್ಲಿ ನಾವು ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು 10 ವರ್ಷದ ವಾರಂಟಿಗಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹೇಳಿದರು.

- ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭರವಸೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಚುನಾವಣೆ ಪೂರ್ವದಲ್ಲಿ ನಾವು ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು 10 ವರ್ಷದ ವಾರಂಟಿಗಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹೇಳಿದರು.ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಫ್ಯಾನ್‌, ಕುಕ್ಕರ್‌ಗಳಿಗೆ 1 ವರ್ಷದ ಗ್ಯಾರಂಟಿ ನೀಡುತ್ತಾರೆ. ಆದರೆ ನಮ್ಮ ಸರ್ಕಾರ ಜನರಿಗೆ 5 ವರ್ಷ 5 ಗ್ಯಾರಂಟಿಗಳನ್ನು ನೀಡಿದೆ. ಇದು ಜನರು ನೀಡಿದ ಜನಸೇವೆ ಮಾಡುವ ನಮಗೆ ನೀಡಿರುವ ಭಾಗ್ಯ. ನಾಡಿನ ಜನರು ನಮ್ಮ ಮೇಲೆ ವಿಶ್ವಾಸ, ನಂಬಿಕೆ ಯಿಟ್ಟಿದ್ದು ಅದನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು.ಚುನಾವಣೆ ಸಂದರ್ಭದಲ್ಲಿ ಜನರು ಆಶೀರ್ವಾದ ಮಾಡಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದರು. ಜನತೆಯ, ದೇವರ ಆಶೀರ್ವಾದ ಸದಾ ನಮ್ಮ ಮೇಲಿದೆ. ನನ್ನ, ಪಕ್ಷದ, ಸರ್ಕಾರದ, ಜನತೆಯ ಪರವಾಗಿ ನಾಡಿನ ಸುಭಿಕ್ಷೆಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಲು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಶೃಂಗೇರಿ, ಗೌರಿಗದ್ದೆ ಪೀಠ, ಕುಮಟಾ, ಇಡಗುಂಜಿ, ಮೈಸೂರು ಕಬ್ಬಾಳ ಪ್ರಮುಖ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ. ಎಲ್ಲಾ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲವೇ 5 ಗ್ಯಾರಂಟಿ ಯೋಜನೆಗಳ ಭಾಗ್ಯವಾಗಿದೆ ಎಂದು ಹೇಳಿದರು.ಎಲ್ಲರೂ ಅವರವರ ಧರ್ಮಗಳಿಗೆ ಅನುಸಾರವಾಗಿ ದೇವರನ್ನು ನಂಬಿ, ಆಚರಣೆ ಮಾಡುತ್ತಾರೆ. ಶಾಂತಿ ನೆಮ್ಮದಿಗಾಗಿ ಜನರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ನಾನು ದೈವಭಕ್ತ, ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ಶೃಂಗೇರಿ ಪೀಠಕ್ಕೆ ಹಿಂದಿನಿಂದಲೂ ಬರುತ್ತಿದ್ದು, ಶ್ರೀ ಶಾರದಾಂಬೆಯ ದರ್ಶನ, ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡು ಹೋಗುತ್ತಿದ್ದೇನೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ ನಾನು ರಾಜ್ಯಮಟ್ಟದ ನಾಯಕ. ಕೇವಲ ಗ್ರಾಮಾಂತರ ಮಟ್ಟದಲ್ಲಿ ಯೋಚಿಸುವುದಿಲ್ಲ. ಡಿ.ಕೆ.ಸುರೇಶ್‌ ಉತ್ತಮ ಜನಸೇವೆ ಮಾಡಿದ್ದಾರೆ. ಅವರ ಸೇವೆಗೆ ಜನರು ಬೆಂಬಲಿಸಲಿದ್ದಾರೆ. ಹಿಂದಿನ ಚುನಾವಣೆಯಲ್ಲಿಯೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ದೇವೇಗೌಡರ ಸೊಸೆ ಸ್ಪರ್ದಿಸಿದ್ದರು. ಈ ಬಾರಿ ಎರಡು ಪಕ್ಷದಿಂದ ಸೇರಿಕೊಂಡು ಅಭ್ಯರ್ಥಿ ನಿಂತಿದ್ದಾರೆ. ಜನಸೇವೆಗೆ ಜನರು ಬೆಬಲಿಸಲಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವ ರಾಜಕಾರಣ ಮಾಡುವುದಿಲ್ಲ. ಜನ ತೀರ್ಮಾನ ಮಾಡುತ್ತಾರೆ.ಮಂಡ್ಯಾ ಚುನಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ. ಹಿಂದಿನ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸಲಾಗಿತ್ತು. ಆದರೆ ಈ ಬಾರಿ 2 ಪಕ್ಷಗಳು ಸೇರಿಕೊಂಡು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮಂಡ್ಯಾ, ಹಾಸನ ಎಲ್ಲೂ ಬೇಕಾದರೂ ನಿಲ್ಲಲ್ಲಿ ಜನ ತೀರ್ಮಾನ ಮಾಡಲಿದ್ದಾರೆ. ನಾನು ಆಡುಭಾಷೆಯಲ್ಲಿ ಏನಾದರೂ ಹೇಳಿರಬಹುದು. ಆದರೆ ಅದರ ಬಗ್ಗೆ ಪಶ್ಚಾತ್ತಾಪವಿದೆ. ಈ ಬಾರಿ ರಾಜ್ಯದಲ್ಲಿ ಅಭಿವೃದ್ಧಿಗಾಗಿ ಮತಹಾಕಿ ಕಾಂಗ್ರೆಸ್‌ ಪಕ್ಷದಿಂದ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಲಿದ್ದಾರೆ ಎಂದರು. ಶಾಸಕ ಟಿ.ಡಿ.ರಾಜೇಗೌಡ, ಕೆಪಿಸಿಸಿ ಕಿಸಾನ್‌ ಸೆಲ್‌ ನ ಸಚಿನ್ ಮೀಗಾ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.ಜಗದ್ಗುರು ಶ್ರೀ ಭಾರತೀ ತೀರ್ಥರ ಭೇಟಿ, ಆಶೀರ್ವಾದ

--- ಜಗದ್ಗುರುಗಳನ್ನು ಭೇಟಿ--

ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬೆಳಿಗ್ಗೆ ಹೆಲಿಕಾಪ್ಟರ್‌ ಮೂಲಕ ಕುಕ್ಕೆ ಸುಬ್ರಮಣ್ಯದಿಂದ ಮೆಣಸೆ ಕೊರಡ್ಕಲ್ ಹೆಲಿಪ್ಯಾಡ್‌ಗೆ ಆಗಮಿಸಿ ನಂತರ ಕಾರಿನ ಮೂಲಕ ಶ್ರೀ ಮಠಕ್ಕೆ ಆಗಮಿಸಿದರು. ನಂತರ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಂಕರಾಚಾರ್ಯ,ಶ್ರೀ ತೋರಣಗಣಪತಿ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು. ಶ್ರೀ ತೋರಣಗಣಪತಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಈಡುಗಾಯಿಗಳನ್ನು ಒಡೆದರು. ನಂತರ ಶ್ರೀಮಠದ ನರಸಿಂಹವನದಲ್ಲಿನ ಶ್ರೀಗುರುಭವನಕ್ಕೆ ತೆರಳಿ ಜಗದ್ಗುರು ಶ್ರೀಭಾರತೀ ತೀರ್ಥರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ಕೆಪಿಸಿಸಿ ಕಿಸಾನ್‌ ಸೆಲ್‌ ಅಧ್ಯಕ್ಷ ಸಚಿನ್‌ ಮೀಗಾ, ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.26 ಶ್ರೀ ಚಿತ್ರ 1-

ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದರು.