ಸಾರಾಂಶ
ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮಾ.೧೦ರಂದು ಹೊಸಕೋಟೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಂದಗುಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಭರವಸೆಯಂತೆ ಜಾರಿಗೊಳಿಸಿದೆ. ಈ ಯೋಜನೆಗಳು ಬಡವರ ಆರ್ಥಿಕ ಸುಧಾರಣೆಗೆ ಪೂರಕವಾಗಿದೆ. ಆದ್ದರಿಂದ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸುತ್ತಿರುವ ಕಾರ್ಯಕ್ರಮದಲ್ಲಿ ಹೆಚ್ಚು ಜನರು ಭಾಗವಹಿಸಿ ಅವರನ್ನು ಗೌರವಿಸಬೇಕು ಎಂದರು.ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ಮಾತನಾಡಿ, ದೇಶವನ್ನಾಳುವ ಸರ್ಕಾರ ಶ್ರೀಮಂತರ ಪರವಾಗಿದ್ದರೆ, ರಾಜ್ಯವನ್ನಾಳುವ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಇದಕ್ಕೆ ನಿದರ್ಶನವಾಗಿ ಬಡವರ ಹೊಟ್ಟೆ ತುಂಬಿಸುವ ಗ್ಯಾರಂಟಿ ಯೋಜನೆಗಳು ಕಣ್ಣ ಮುಂದಿವೆ. ಪ್ರಮುಖವಾಗಿ ನುಡಿದಂತೆ ನಡೆದಿರುವ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಗಿದೆ ಎಂದರು. ಅಷ್ಟೇ ಅಲ್ಲದೆ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ ರಾಜಶೇಖರ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ಮುನಿಶಾಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಗೀರ್ ಅಹಮ್ಮದ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಎನ್.ಹೊಸಹಳ್ಳಿ ರವಿ, ತಾಪಂ ಮಾಜಿ ಸದಸ್ಯ ಬೀರಪ್ಪ ಹಾಜರಿದ್ದರು.ಫೋಟೋ : 6 ಹೆಚ್‌ಎಸ್‌ಕೆ 1
ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಡೆಯಿತು.