ದ.ಕ.ದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್

| Published : Apr 21 2024, 02:16 AM IST

ದ.ಕ.ದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ಮೋದಿ ಪಕ್ಷವನ್ನು ಬೆಳೆಸುವ ಕೆಲಸ ಮಾಡದೆ ತಮ್ಮ ವ್ಯಕ್ತಿತ್ವವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಮಧ್ಯಮ ವರ್ಗದ ಜನರಿಗೆ ಯಾವುದೇ ಅನುಕೂಲವಾಗಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಕಾಂಗ್ರೆಸ್‌ಗೆ ಲೋಕಸಭೆಯಲ್ಲಿ ಅವಕಾಶ ಸಿಕ್ಕಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ಅಲೆ ಇದ್ದು ಗೆಲ್ಲುವ ಉತ್ತಮ ಅವಕಾಶ ಇದೆ. ಇದಕ್ಕೆ ಕಾರ್ಯಕರ್ತರ ಪ್ರಾಮಾಣಿಕ ಶ್ರದ್ಧೆ, ನಾಯಕರುಗಳ ಒಗ್ಗಟ್ಟು ಶಕ್ತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಶುಕ್ರವಾರ ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೀಳುಮಟ್ಟದ ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ರಾಮರಾಜ್ಯದ ಬದಲು ರಾವಣ ರಾಜ್ಯವನ್ನು ಸೃಷ್ಟಿಸುತ್ತಿದೆ. ಪ್ರಧಾನಿ ಮೋದಿ ಪಕ್ಷವನ್ನು ಬೆಳೆಸುವ ಕೆಲಸ ಮಾಡದೆ ತಮ್ಮ ವ್ಯಕ್ತಿತ್ವವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಮಧ್ಯಮ ವರ್ಗದ ಜನರಿಗೆ ಯಾವುದೇ ಅನುಕೂಲವಾಗಿಲ್ಲ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿದರು. ಮಾಜಿ ಶಾಸಕ ಜೆ.ಆರ್. ಲೋಬೋ, ಮುಖಂಡರಾದ ಧರಣೇಂದ್ರ ಕುಮಾರ್, ಶೇಖರ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ನಾಗೇಶ್ ಕುಮಾರ್, ಜೈಸನ್ ಪಟ್ಟೇರಿ, ಸುದರ್ಶನ್ ಶೆಟ್ಟಿ, ಕರೀಂ ಗೇರುಕಟ್ಟೆ, ಸುಭಾಶ್ಚಂದ್ರ ರೈ, ನಾಗೇಶ್ ಗೌಡ, ನಮಿತಾ ಪೂಜಾರಿ, ಜಗದೀಶ್, ನೇಮಿರಾಜ ಮತ್ತಿತರರು ಉಪಸ್ಥಿತರಿದ್ದರು.

ಸತೀಶ್ ಕಾಶಿಪಟ್ಣ ಕಾರ್ಯಕ್ರಮ ನಿರೂಪಿಸಿದರು. ಕೆ. ಪ್ರಕಾಶ್ ಶೆಣೈ, ಪದ್ಮನಾಭ ಶೆಣೈ, ದಿವ್ಯಲಕ್ಷ್ಮೀ, ರೋಹಿತ್ ಹಾಗೂ ನಾಸಿರ್ ಬಾಷಾ ಪಕ್ಷಕ್ಕೆ ಸೇರ್ಪಡೆಗೊಂಡರು.