ದೇಶದ ಸಾರ್ವಭೌಮತ್ವ, ಸಮಾನತೆ ಎತ್ತಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿ

| Published : Nov 16 2025, 02:15 AM IST

ದೇಶದ ಸಾರ್ವಭೌಮತ್ವ, ಸಮಾನತೆ ಎತ್ತಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿ
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ನೂರಾರು ವರ್ಷಗಳಿಂದ ದೇಶದ ಶೋಷಿತ, ಬಡವರು, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಅಲೆಮಾರಿಗಳು ಸೇರಿದಂತೆ ಎಲ್ಲಾ ಜನಾಂಗಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ದೇಶದ ಸಾರ್ವಭೌಮತ್ವ, ಸಮಾನತೆಯನ್ನು ಎತ್ತಿ ಹಿಡಿಯುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಚಳ್ಳಕೆರೆ: ಕಳೆದ ನೂರಾರು ವರ್ಷಗಳಿಂದ ದೇಶದ ಶೋಷಿತ, ಬಡವರು, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಅಲೆಮಾರಿಗಳು ಸೇರಿದಂತೆ ಎಲ್ಲಾ ಜನಾಂಗಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ದೇಶದ ಸಾರ್ವಭೌಮತ್ವ, ಸಮಾನತೆಯನ್ನು ಎತ್ತಿ ಹಿಡಿಯುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸಿ.ಟಿ.ಶ್ರೀನಿವಾಸ್‌ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡು ಪಕ್ಷವನ್ನು ಜನಮಾನಸದೊಂದಿಗೆ ಗುರುತಿಸುವ ಪ್ರತಿಯೊಬ್ಬ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಜವಾಬ್ದಾರಿ ನೀಡುವ ಮೂಲಕ ಅವರ ಸೇವೆಗೆ ಮನ್ನಣೆ ನೀಡುತ್ತಾ ಬಂದಿದೆ ಎಂದರು.

ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ತಾಪಂ ಮಾಜಿ ಸದಸ್ಯ ಸಿ.ಟಿ.ಶ್ರೀನಿವಾಸ್‌ ಅವರನ್ನು ಗುರುತಿಸಿ ರಾಜ್ಯಮಟ್ಟದ ಜವಾಬ್ದಾರಿಯನ್ನು ಪಕ್ಷ ಅವರಿಗೆ ನೀಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಅವರನ್ನು ನೇಮಿಸಿ ಆದೇಶಿಸಿದೆ. ಪಕ್ಷದ ಆದೇಶ ಪ್ರತಿಯನ್ನು ಅವರಿಗೆ ನೀಡಿ ಅವರು ಇಂದಿನಿಂದಲೇ ಸ್ಥಾನದಲ್ಲಿ ಕಾರ್ಯನಿರ್ವಹಿಸುವಂತೆ ಎಲ್ಲರಪರವಾಗಿ ಮನವಿ ಮಾಡುತ್ತೇನೆ ಎಂದರು.

ಸಿ.ಟಿ.ಶ್ರೀನಿವಾಸ್ ಮಾತನಾಡಿ, ನನಗೆ ಹೊಸ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಶಾಸಕರ ಮಾರ್ಗದರ್ಶನದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ. ನನ್ನ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಜವಾಬ್ದಾರಿ ನೀಡಿದ ಪಕ್ಷದ ಎಲ್ಲಾ ಮುಖಂಡರಿಗೂ, ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ನಗರಸಭೆ ಮಾಜಿ ಸದಸ್ಯ ಎಂ.ಜೆ.ರಾಘವೇಂದ್ರ, ಕಾಂಗ್ರೆಸ್ ಮುಖಂಡ ಭರಮಣ್ಣ, ರುದ್ರಮುನಿ, ಸುಧಾಕರ ಮುಂತಾದವರು ಉಪಸ್ಥಿತರಿದ್ದರು.