ಬುಡಕಟ್ಟು ಜನಾಂಗದ ಅಸ್ತಿತ್ವ, ಬಡತನ, ಅಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ಭಗವಾನ್ ಬಿರ್ಸಾ ಮುಂಡಾ ಅವರಂತಹ ಅನೇಕ ಸ್ವಾತಂತ್ರ್ಯ ಹೋರಾಟಗಾರ ಬಲಿದಾನವನ್ನು ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಮರೆಮಾಚಿದೆ. ಸ್ವಾಭಿಮಾನಿ ಭಾರತ ನಿರ್ಮಾಣದತ್ತ ಕೊಡುಗೆ ನೀಡಿದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜೀವನಾದರ್ಶ ಸದಾ ಪ್ರೇರಣಾದಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಬುಡಕಟ್ಟು ಜನಾಂಗದ ಅಸ್ತಿತ್ವ, ಬಡತನ, ಅಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ಭಗವಾನ್ ಬಿರ್ಸಾ ಮುಂಡಾ ಅವರಂತಹ ಅನೇಕ ಸ್ವಾತಂತ್ರ್ಯ ಹೋರಾಟಗಾರ ಬಲಿದಾನವನ್ನು ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಮರೆಮಾಚಿದೆ. ಸ್ವಾಭಿಮಾನಿ ಭಾರತ ನಿರ್ಮಾಣದತ್ತ ಕೊಡುಗೆ ನೀಡಿದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜೀವನಾದರ್ಶ ಸದಾ ಪ್ರೇರಣಾದಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.ಅವರು ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ವತಿಯಿಂದ ಭಾನುವಾರ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ, ಭಗವಾನ್ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಿರ್ಸಾ ಮುಂಡಾ ಅವರ ಜೀವನ ಗಾಥೆಯ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ನಾರಾಯಣ ನಾಯ್ಕ್, ರಾಮ ನಾಯ್ಕ್, ರೇವತಿ ನಾಯ್ಕ್, ಕಾರ್ಯದರ್ಶಿಗಳಾದ ನವೀನ್ ನಾಯ್ಕ್, ಸುಜಾತ ನಾಯ್ಕ್, ಕಾರ್ಯಕಾರಿಣಿ ಸದಸ್ಯರಾದ ದಯಾನಂದ ನಾಯ್ಕ್, ಸುರೇಂದ್ರ ನಾಯ್ಕ್, ಸಂದೀಪ್ ನಾಯ್ಕ್, ಗೀತಾ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನಬೈಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಪೆರ್ಡೂರು ವಂದಿಸಿದರು.