ಕಾಂಗ್ರೆಸ್ ಗೆದ್ದಿದೆ, ಹರಿಹರ ಶಾಸಕ ರಾಜಿನಾಮೆ ನೀಡಲಿ

| Published : Jun 05 2024, 12:31 AM IST

ಸಾರಾಂಶ

ಚುನಾವಣೆಗೆ ಮುನ್ನವೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆಂದು ಹೇಳಿದ್ದೆ. ನಾನು ಹೇಳಿದಂತೆಯೇ ನಮ್ಮ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಅವರಿಗೆ ಸವಾಲು ಹಾಕಿದ್ದಾರೆ.

- ಬಿ.ಪಿ. ಹರೀಶ್‌ಗೆ ಚನ್ನಗಿರಿ ಕ್ಷೇತ್ರ ಶಾಸಕ ಶಿವಗಂಗಾ ಬಸವರಾಜ ಸವಾಲು - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಚುನಾವಣೆಗೆ ಮುನ್ನವೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆಂದು ಹೇಳಿದ್ದೆ. ನಾನು ಹೇಳಿದಂತೆಯೇ ನಮ್ಮ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಅವರಿಗೆ ಸವಾಲು ಹಾಕಿದ್ದಾರೆ.

ತಾಲೂಕಿನ ಶಿವಗಂಗೋತ್ರಿಯ ದಾವಿವಿ ಮತ ಎಣಿಕಾ ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷವು ಒಂದುವೇಳೆ ಸೋತರೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಹೇಳಿದ್ದೆ. ನಮ್ಮ ಪಕ್ಷ ಗೆದ್ದಿದ್ದು, ರಾಜಿನಾಮೆ ನೀಡುವುದಿಲ್ಲ. ಆದರೆ, ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ನನಗೆ ಸವಾಲು ಹಾಕಿದ್ದರು. ಈಗ ನಮ್ಮ ಪಕ್ಷ ಇಲ್ಲಿ ಗೆದ್ದಿದೆ. ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದರು.

ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರಿಗೆ ಗೆಲುವು ಸಲ್ಲುತ್ತದೆ. ನಮ್ಮೆಲ್ಲಾ ಏಳು ಶಾಸಕರು ಹಗಲು-ರಾತ್ರಿ ಎನ್ನದೇ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರಿಗೂ ಅಭಿನಂದಿಸುತ್ತೇನೆ. ನಾನು ಮೊದಲೇ ಹೇಳಿದ್ದಂತೆ ಈ ಸಲ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಲೋಕಸಭೆಗೆ ಕಳಿಸುತ್ತಿದ್ದೇವೆ. ಕಾಂಗ್ರೆಸ್ಸಿನ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳೇ ಈ ಗೆಲುವನ್ನು ತಂದುಕೊಟ್ಟಿವೆ ಎಂದು ಶಿವಗಂಗಾ ಬಸವರಾಜ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

- - - -4ಕೆಡಿವಿಜಿ19: ಶಿವಗಂಗಾ ವಿ.ಬಸವರಾಜ, ಶಾಸಕ, ಕಾಂಗ್ರೆಸ್‌, ಚನ್ನಗಿರಿ ಕ್ಷೇತ್ರ