ಆರೆಸ್ಸೆಸ್ ಎದುರು ಹಾಕಿಕೊಂಡಿರುವ ಕಾಂಗ್ರೆಸ್‌ ಭಸ್ಮ: ಶೆಟ್ಟರ್‌

| Published : Oct 21 2025, 01:00 AM IST

ಆರೆಸ್ಸೆಸ್ ಎದುರು ಹಾಕಿಕೊಂಡಿರುವ ಕಾಂಗ್ರೆಸ್‌ ಭಸ್ಮ: ಶೆಟ್ಟರ್‌
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ.‌ ಕಾನೂನು ಸುವ್ಯವಸ್ಥೆ, ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಇದನ್ನೆಲ್ಲ ಮರೆಮಾಚಲು ಆರೆಸ್ಸೆಸ್ ಹಿಂದೆ ಬಿದ್ದಿದ್ದಾರೆ.

ಹುಬ್ಬಳ್ಳಿ:

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ವನ್ನು ಕಾಂಗ್ರೆಸ್‌ ಎದುರು ಹಾಕಿಕೊಂಡಿದೆ. ಇದು ಕಾಂಗ್ರೆಸ್ಸಿನ ಅಂತ್ಯದ ಆರಂಭ ಎಂದು ಸಂಸದ ಜಗದೀಶ ಶೆಟ್ಟರ್ ಕಿಡಿಕಾರಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ.‌ ಕಾನೂನು ಸುವ್ಯವಸ್ಥೆ, ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಇದನ್ನೆಲ್ಲ ಮರೆಮಾಚಲು ಆರೆಸ್ಸೆಸ್ ಹಿಂದೆ ಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರಿಯಾಂಕ್ ಖರ್ಗೆ ತಮ್ಮ ಇಲಾಖೆ ಬಗ್ಗೆ ಕಾಳಜಿ ವಹಿಸುವುದನ್ನು ಬಿಟ್ಟು ಆರೆಸ್ಸೆಸ್ ಬಗ್ಗೆ ಮಾತನಾಡುತ್ತಾರೆ.‌ ಗುತ್ತಿಗೆದಾರರ ಆರೋಪಕ್ಕೆ ಕೋರ್ಟ್‌ಗೆ ಹೋಗಲಿ ಎಂದು ಸಿದ್ದರಾಮಯ್ಯ ಹೇಳುತ್ತಿರುವುದು ಸರಿಯಲ್ಲ ಎಂದರು.

ಕಾಂಗ್ರೆಸ್ಸಿಗೆ ಕರ್ನಾಟಕ ಎಟಿಎಂ:

ರಾಜ್ಯ ಸರ್ಕಾರ ಇಲ್ಲಿಯ ಹಣ ಲೂಟಿ ಮಾಡಿ ಬಿಹಾರ ಚುನಾವಣೆಗೆ ಕಳುಹಿಸುತ್ತಿದೆ. ಒಂದೊಂದು ಇಲಾಖೆಗೆ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈಚೆಗೆ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿಯೇ ಮುಖ್ಯಮಂತ್ರಿಗಳು ಔತಣಕೂಟ ಏರ್ಪಡಿಸಿದ್ದರು. ಬೆಂಗಳೂರು ಜನ ಸರ್ಕಾರದ ವರ್ತನೆಯಿಂದ ಭ್ರಮನಿರಸನಗೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ಮಿತಿ ಮೀರಿದೆ. ವಿವಿಧ ಇಲಾಖೆಗಳಲ್ಲಿ ಲೂಟಿ ಮಾಡಿರುವ ಹಣವನ್ನೆಲ್ಲ ಬಿಹಾರ ಚುನಾವಣೆಗೆ ಕಳುಹಿಸಲಾಗುತ್ತಿದೆ ಎಂದು ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.