ಕನ್ನಡಪ್ರಭ ವಾರ್ತೆ ಮುಧೋಳರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಕಾಂಗ್ರೆಸ್ ಸರ್ಕಾರ ಎಂದರೆ ಹಗರಣಗಳ ಸರ್ಕಾರ ಅನ್ನುವದಕ್ಕೆ ಮುಖ್ಯವಾಗಿ ಗೃಹಲಕ್ಷ್ಮೀ, ವಾಲ್ಮೀಕಿ ಹಗರಣಗಳೇ ಸಾಕ್ಷಿ ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಕಾಂಗ್ರೆಸ್ ಸರ್ಕಾರ ಎಂದರೆ ಹಗರಣಗಳ ಸರ್ಕಾರ ಅನ್ನುವದಕ್ಕೆ ಮುಖ್ಯವಾಗಿ ಗೃಹಲಕ್ಷ್ಮೀ, ವಾಲ್ಮೀಕಿ ಹಗರಣಗಳೇ ಸಾಕ್ಷಿ ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ, ದೀನದಲಿತರಿಗೆ ಅನ್ಯಾಯವಾಗಿದೆ, ಎಸ್ಸಿ, ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನು ಬೇರೆಡೆ ಬಳಸಿಕೊಂಡಿದೆ. ಸರ್ಕಾರದ ಖಜಾನೆಯ ದುಡ್ಡನ್ನು ಚುನಾವಣಾ ಪ್ರಚಾರಕ್ಕೆ ಬಳಿಸಿಕೊಂಡಿದೆ ಎಂದು ಆರೋಪಿಸಿದ ಅವರು, ಸಾವಿರಾರು ಕೋಟಿ ಹಗರಣಗಳಾಗಿರುವುದನ್ನು ಇಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.

ಮಂತ್ರಿಮಂಡಲ ವಿಸ್ತರಣೆಯಲ್ಲಿ ಕಾಲ ಕಳೆಯುತ್ತಿರುವ ಮುಖ್ಯಮಂತ್ರಿಗಳು ಬರಗಾಲವನ್ನು ಎದುರಿಸಲು ಮುಂದಾಗಬೇಕು. ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತಿ ಜಿಲ್ಲೆಗೆ ₹100 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಆಗ್ರಹಿಸಿದರು.

ಪಂಚ ಗ್ಯಾರಂಟಿ ಯೋಜನೆಯು ಸಂಪೂರ್ಣ ವಿಫಲವಾಗಿದೆ, ಯಾವುದೇ ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಸಾದ್ಯವಾಗಿಲ್ಲ, ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಆಗದೆ ಇರುವದರಿಂದ ಜನರು ರೋಷಿ ಹೋಗಿದ್ದಾರೆ, ಮುಂಬರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಲಿದ್ದಾರೆಂದು ಹೇಳಿದರು.

ಬಿಜೆಪಿ ಮುಖಂಡರಾದ ಕೆ.ಆರ್.ಮಾಚಪ್ಪನವರ, ಸದಾಶಿವ ತೇಲಿ, ಲಕ್ಷ್ಮಣ ಚಿನ್ನಣ್ಣವರ, ಧರೆಪ್ಪ ಸಾಂಗ್ಲಿಕರ, ಸಂಗಣ್ಣ ಕಾತರಕಿ, ಕೆ.ಎಸ್.ಹಿರೇಮಠ, ಶ್ರೀಶೈಲಗೌಡ ಪಾಟೀಲ, ಗುರುಪಾದ ಕುಳಲಿ, ಶಂಕರ ನಾಯ್ಕ, ಮಾರುತಿ ಆನಿ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.