ಸಾರಾಂಶ
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ ಪಕ್ಷ, ಬಿಜೆಪಿ ಶ್ರೀಮಂತರ ಪರ ಪಕ್ಷವಾಗಿದೆ. ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ಹಿನ್ನೆಲೆ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅಧಿಕ ಮತಗಳನ್ನು ನೀಡಿ ಸಹಕರಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ ಪಕ್ಷ, ಬಿಜೆಪಿ ಶ್ರೀಮಂತರ ಪರ ಪಕ್ಷವಾಗಿದೆ. ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ಹಿನ್ನೆಲೆ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅಧಿಕ ಮತಗಳನ್ನು ನೀಡಿ ಸಹಕರಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.ಕೊಳ್ಳೇಗಾಲದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯವಿದೆ. ಸರ್ಕಾರದ ಗ್ಯಾರಂಟಿ ಯೋಜನೆಯೂ ಜಾತ್ಯಾತೀತವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರ ಏಳ್ಗೆಗಾಗಿಯೇ ಇರುವ ಪಕ್ಷವಾಗಿದೆ. ಬಿಜೆಪಿ ಅಭ್ಯರ್ಥಿಯನ್ನು ಲೋಕಸಭಾ ಚುನಾವಣೆಯಲ್ಲಿ ಮತದಾರರು ತಿರಸ್ಕರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರ ರೈತ ವಿರೋಧಿ ಹಾಗೂ ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು. ಸುನೀಲ್ ಬೋಸ್ ಜನಪರ ಕಾಳಜಿಯ ವ್ಯಕ್ತಿ. ಈ ಭಾಗದಲ್ಲಿ ಕಳೆದ ವಿಧಾನ ಸಬಾ ಚುನಾವಣೆಯಲ್ಲಿ 1ಲಕ್ಷಕ್ಕೂ ಅಧಿಕ ಮತಗಳನ್ನು ನೀಡಿರುವಂತೆ ಈ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, ನಿಮ್ಮ ಮನೆ ಮಗನಾಗಿ ಸೇವೆ ಮಾಡುವೆ, ನನಗೆ ಆಶೀರ್ವಾದಿಸಬೇಕು ಎಂದರು.
ಹೈಕಮಾಂಡ್ ಬಿಫಾರಂ ನೀಡಿದ ಹಿನ್ನೆಲೆ ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಇದು ನನ್ನ ಮೊದಲ ಚುನಾವಣೆಯಾಗಿದೆ. ಈ ಹಿನ್ನೆಲೆ ಮತದಾರರು ನನಗೆ ಬೆಂಬಲ ನೀಡಿ ಆಶೀರ್ವಾದ ಮಾಡಬೇಕು ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಗರಸಭೆ ಮಾಜಿ ಅಧ್ಯಕ್ಷ ರಮೇಶ್, ರೇಖಾ ರಮೇಶ್, ಬಸ್ತಿಪುರ ಶಾಂತರಾಜು, ಎ ಪಿ ಶಂಕರ್, ನಾಗರಾಜು, ರಾಜಶೇಖರಮೂರ್ತಿ, ಸುರೇಶ್, ಹರ್ಷ, ಆಟೋ ಶಿವು, ಚೇತನ್ ದೊರೆರಾಜು, ಡಿ ಎನ್ ನಟರಾಜು, ದಿಲೀಪ್ ಇದ್ದರು.