ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಕಾಂಗ್ರೆಸ್ ಸರ್ಕಾರ ಬಿಜೆಪಿ ವಿರುದ್ಧ ಓಟ್ ಚೋರಿ ಬಗ್ಗೆ ದೊಡ್ಡ ಆರೋಪಗಳನ್ನು ಮಾಡಿದ್ದು, ಆದರೆ ಓಟ್ ಚೋರ್ ಮಾಡಿದ್ದು ಕಾಂಗ್ರೆಸ್ ಪಕ್ಷದವರೆ ಎಂದು ಕಾಂಗ್ರೆಸ್ ಮುಖಂಡರು ಬಾಯಲ್ಲಿ ಬಂದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಲಕ್ಷ್ಮಣ ತಪಶಿ ಹೇಳಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬರೆದ ಬಾಬಾಸಾಹೇಬ್ ಅಂಬೇಡ್ಕರ್‌ಗೆ ಕಾಂಗ್ರೆಸ್ ಸರ್ಕಾರ ಎಷ್ಟೊಂದು ಅವಮಾನ ಮಾಡಿದೆ. ಈಗ ಸಂವಿಧಾನ ಪುಸ್ತಕ ಜೇಬಲ್ಲಿಟ್ಟುಕೊಂಡು ಜನರಿಗೆ ಮೋಸ ಮಾಡಲು ಹೊರಟಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಅಂಬೇಡ್ಕರ್ ಅವರಿಗೆ ಸಲ್ಲಬೇಕಾದ ಗೌರವ ನೀಡುತ್ತಿದ್ದಾರೆ. ಈಗ ಅಹಿಂದ ನಾಯಕರು ಅಂಬೇಡ್ಕರ್ ಹೆಸರು ಬಳಸಿಕೊಂಡು ಮೋಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ಜವಾಹರಲಾಲ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿಗೆ ಭಾರತರತ್ನ ನೀಡಿದರು. ಆದರೆ ಸಂವಿಧಾನ ಬರೆದ ಅಂಬೇಡ್ಕರ್ ಅವರಿಗೆ ನೀಡಲು ಅವರಿಗೆ ಬಿಡುವಿರಲಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಮಾತನಾಡಿ, ಇಂದು ನಮ್ಮ ಜಿಲ್ಲೆಯಲ್ಲೂ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಉಸ್ತುವಾರಿಗಳಾಗಿರುವ ಲಕ್ಷ್ಮಣ ತಪಶಿ ನೇತೃತ್ವದಲ್ಲಿ ಪ್ರಚಾರ ಕೈಗೊಂಡು ಅಂಬೇಡ್ಕರ್ ಅವರನ್ನ ಕಾಂಗ್ರೆಸ್ ಪಕ್ಷ ಹೇಗೆ ಕಡೆಗಣಿಸಿತು ಎಂಬುದನ್ನು ಈ ಅಭಿಯಾನದ ಮೂಲಕ ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷ ಶಾಂಭವಿ ಅಶ್ವಥಪೂರ, ಸಂಜಯ ಪಾಟೀಲ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಪ್ರವೀಣ ಕೆಂಪವಾಡೆ, ಬಾಬಾಸಾಹೇಬ ಕೆಂಚನ್ನವರ ಸೇರಿ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))