ಸಾರಾಂಶ
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ । ನನ್ನ ಕೈ ಬಿಟ್ಟಿದ್ದರಿಂದ ಕಳೆದ ಬಾರಿ ಬಿಜೆಪಿ ಸೋಲಬೇಕಾಯಿತು.
ಕನ್ನಡಪ್ರಭ ವಾರ್ತೆ, ಕೊಪ್ಪಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''''''''ಶೃಂಗೇರಿ ಹಾಗೂ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಮ್ಮ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ದಕ್ಷತೆ ಹಾಗೂ ಅನುಭವವಿದೆ. ಈ ಹಿಂದೆ ತಮ್ಮ ಅವಧಿಯಲ್ಲಿ ಜಿಲ್ಲೆಯ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದರು.ಮೈತ್ರಿಪಕ್ಷದ ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿ ಮುಖಂಡರು ಗೌರವಯುತವಾಗಿ ನಡೆಸಿಕೊಂಡಿಲ್ಲ ಎಂದು ಬೇಸತ್ತಿರುವ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ಅನ್ನು ಬೆಂಬಲಿಸುವಂತೆ ಅವರನ್ನು ನಾನು ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.ಕೆಪಿಸಿಸಿ ವಕ್ತಾರ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಧ್ಯಮ ಉಸ್ತುವಾರಿ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಜೆಡಿಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಪ್ರೀತಿ ಇದೆ, ಅವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿ ಸುತ್ತಾರೆ. ಶೃಂಗೇರಿ ಕ್ಷೇತ್ರದಲ್ಲೂ ಇದೇ ವಾತಾವರಣವಿದೆ. ಕಾಂಗ್ರೆಸ್‌ನಿಂದ ೨೦ ತಿಂಗಳ ಅವಧಿಗೆ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆಯವರು ಮಾಡಿದ ಅಭಿವೃದ್ಧಿಗಳು ಈ ಬಾರಿ ಚುನಾವಣೆಯಲ್ಲಿ ಅವರಿಗೆ ವರವಾಗಲಿದೆ. ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಅವರು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಶೃಂಗೇರಿ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ಮಾತನಾಡಿ, ಜಯಪ್ರಕಾಶ್ ಹೆಗ್ಡೆ ಅವರ ವೈಯಕ್ತಿಕ ವರ್ಚಸ್ಸು, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಪೂರಕವಾಗಿದೆ. ಮೂಡಿಗೆರೆಯ ಎಂ.ಪಿ.ಕುಮಾರಸ್ವಾಮಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಈಗಾಗಲೇ ಪ್ರತೀ ಪಂಚಾಯಿತಿ ಮಟ್ಟದಲ್ಲೂ ಚುನಾವಣಾ ತಯಾರಿ ಸಭೆಗಳು ನಡೆದಿದ್ದು ಪಕ್ಷ ಚುನಾವಣೆಗೆ ಸಜ್ಜಾಗಿದೆ ಎಂದು ಮಾಹಿತಿ ನೀಡಿದರು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಪ್ರಥಮ ಬಾರಿಗೆ ಕೊಪ್ಪಕ್ಕೆ ಆಗಮಿಸಿದ ಎಂ.ಪಿ.ಕುಮಾರಸ್ವಾಮಿ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಸುಧೀರ್ ಕುಮಾರ್ ಮುರೊಳ್ಳಿಯವರನ್ನು ಯುವ ಕಾಂಗ್ರೆಸ್ ನಿಂದ ಅಭಿನಂದಿಸಲಾಯಿತು.ಪ್ರಚಾರ ಸಮಿತಿ ಉಪಾಧ್ಯಕ್ಷ ಓಣಿತೋಟ ರತ್ನಾಕರ್, ಸಮಿತಿ ಕಾರ್ಯದರ್ಶಿ ಪಣಿರಾಜ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಜಿತ್ ದಂಡಿನಮಕ್ಕಿ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾಚರಣ್, ಮುಖಂಡರಾದ ಅಶ್ರಿತ್, ಮಂಜುನಾಥ್, ಸಂತೋಷ್ ಕುಲಾಸೋ, ತೋಯಿಬ್, ಸುರೇಶ್, ಪಟ್ಟಣ ಪಂಚಾಯಿತಿ ಸದಸ್ಯೆ ಮೈತ್ರಾ ಗಣೇಶ್ ಇದ್ದರು.