ಸಾರಾಂಶ
ರಾಜ್ಯದಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತದಾರರು ಕೋಮುವಾದಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.
ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿಹಂಚಿ ವಿಜಯೋತ್ಸವ ಆಚರಿಸಿದರು.
ಈ ಕುರಿತು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸಾಹಿರಾಬಾನು ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಿಂತೆ ಪಂಚ ಗ್ಯಾರಂಟಿಗಳನ್ನು ಈಡೇರಿಸಿರುವುದು ಗೆಲುವಿಗೆ ಸಹಕಾರಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತದಾರರು ಕೋಮುವಾದಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೋರಿ ಗೋಣಿಬಸಪ್ಪ ಮಾತನಾಡಿ, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಗೆಲುವಿಗೆ ಸಚಿವ ಸಂತೋಷ್ ಲಾಡ್ ಮತ್ತು ಕೆಎಂಎಫ್ ಅಧ್ಯಕ್ಷ ಎಸ್.ಭೀಮನಾಯ್ಕ ಪರಿಪೂರ್ಣ ಶ್ರಮವಹಿಸಿದ್ದಾರೆ ಎಂದರು.
ಕೆಪಿಸಿಸಿ ವಕ್ತಾರ ಪತ್ರೇಶ್ ಹಿರೇಮಠ, ಕೆಎಂಎಫ್ ಅಧ್ಯಕ್ಷರ ಆಪ್ತ ಸಹಾಯಕ ಗೆದ್ಲಗಟ್ಟಿ ಸೋಮು ಮಾತನಾಡಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಚ್.ಎಂ. ನೂರಿ, ಪುರಸಭೆ ಸದಸ್ಯರಾದ ರಾಜೇಶ್ ಬೆಡಗಿ, ತ್ಯಾವಣಗಿ ಕೊಟ್ರೇಶ್, ಉಪ್ಪಾರ ಬಾಳಪ್ಪ, ಮುಖಂಡರಾದ ಹಾಲ್ದಾಳ್ ವಿಜಯಕುಮಾರ್, ಅಂಡಾ ಖಾಸೀಂ, ಮಾರುತಿ, ಬಂಟರ ಕುಬೇರ, ಪ್ರಕಾಶ್ ಇತರರಿದ್ದರು.ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.