ಶಾಸಕ ಬಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

| Published : Nov 09 2024, 01:17 AM IST

ಸಾರಾಂಶ

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ಅಭಿವೃದ್ದಿ ಕೆಲಸಗಳು ಮತ್ತು ಐದು ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಮನೆಮಾತಾಗಿದ್ದು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

-ಮತ್ತಿಕೆರೆ ಗ್ರಾಮದಲ್ಲಿ ಪಕ್ಷ ಸೇರ್ಪಡೆಯಾದ ಮುಖಂಡರಿಗೆ ಕಾಂಗ್ರೆಸ್ ಶಾಲು ಹಾಕಿ ಸ್ವಾಗತ

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ಅಭಿವೃದ್ದಿ ಕೆಲಸಗಳು ಮತ್ತು ಐದು ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಮನೆಮಾತಾಗಿದ್ದು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಚನ್ನಪಟ್ಟಣ ಕ್ಷೇತ್ರದ ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮತ್ತಿಕೆರೆ ಗ್ರಾಮದಲ್ಲಿ ಶುಕ್ರವಾರ ಪ್ರಚಾರ ನಡೆಸಿ ಪಕ್ಷ ಸೇರ್ಪಡೆಯಾದ ಮುಖಂಡರಿಗೆ ಕಾಂಗ್ರೆಸ್ ಶಾಲು ಹಾಕಿ ಸ್ವಾಗತಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರುಗಳು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದು, ಪ್ರಮುಖವಾಗಿ ಐದು ಯೋಜನೆಗಳು ಬಡವರ ಬದುಕಿನ ಆಶಾಕಿರಣವಾಗಿವೆ. ಅದನ್ನರಿತಿರುವ ರೈತರು, ಮಹಿಳೆಯರು, ಯುವಕರು ಒಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲು ಉಪ ಚುನಾವಣೆಯಲ್ಲಿ ಜನರು ಕಂಕಣ ಬದ್ದರಾಗಿದ್ದಾರೆ ಎಂದರು.

ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಮೇಲೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಅವರ ರಾಜಕೀಯ ಲಾಭಕ್ಕಾಗಿ ಚನ್ನಪಟ್ಟಣಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಉಪಚುನಾವಣೆ ಎದುರಾಗಿದೆ. ಚನ್ನಪಟ್ಟಣ ಕ್ಷೇತ್ರ ಮತ್ತೆ ದೇವೇಗೌಡರ ಕುಟುಂಬವರಿಗೆ ಸೀಮಿತವಾದರೆ ಬೇರೆಯವರಿಗೆ ಅವಕಾಶ ಬೇಡವೇ ಎಂದು ಪ್ರಶ್ನಿಸಿದ ಅವರು, ಕ್ಷೇತ್ರದ ಮಗ ಅಭಿವೃದ್ಧಿಯ ಕನಸ್ಸು ಕಂಡಿರುವ ಸಿ.ಪಿ.ಯೋಗೇಶ್ವರ್ ಗೆಲ್ಲಿಸಲು ಮತದಾರರು ಪಕ್ಷಾತೀತವಾಗಿ ಬೆಂಬಲ ನೀಡಿ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಯರೇಹಳ್ಳಿ ಮಂಜು ಮಾತನಾಡಿ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಸಲಹೆಯಂತೆ ಮನೆ ಮನೆಗೆ ತೆರಳಿ ಸಿಪಿವೈ ಪರಮತಯಾಚನೆ ಮಾಡುತ್ತಿದ್ದೇವೆ. ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದು ಈ ಉಪ ಚುನಾವಣೆಯಲ್ಲಿ ಯೋಗೇಶ್ವರ್ ಗೆಲವು ಸಾಧಿಸಿದರೆ ನೀರಾವರಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ ವಿಷಯದ ಮಾನದಂಡದ ಮೇಲೆ ಮತಯಾಚನೆ ಮಾಡುತ್ತಿದ್ದೇವೆ ಎಂದರು.

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಮಳೂರು ಜಿಪಂನಲ್ಲಿ ಒಕ್ಕಲಿಗ ಮತಗಳ ಪ್ರಾಬಲ್ಯವಿದೆ. ಒಕ್ಕಲಿಗ ಮತಗಳು ಜೆಡಿಎಸ್ಗೆ ಸೀಮಿತ ಎಂಬಂತೆ ಬಿಂಬಿಸುತ್ತಿ ರುವುದರಲ್ಲಿ ಅರ್ಥವಿಲ್ಲ, ಯೋಗೇಶ್ವರ್ ಪರವಾಗಿಯೂ ಬಹುತೇಕ ಒಕ್ಕಲಿಗ ಮತಗಳು ಅವರ ಬೆಂಬಲಕ್ಕೆ ನಿಂತಿವೆ ಎಂದರು.

ಈ ವೇಳೆ ಕಳ್ಳಿಹೊಸೂರು ಗ್ರಾಮದ ಅಶೋಕ್ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾದರು. ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ನಟರಾಜು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಬಮೂಲ್ ಮಾಜಿ ಅಧ್ಯಕ್ಷ ನರಸಿಂಹಮೂತರ್ಿ, ಮುಖಂಡರಾದ ಕಬ್ಬಡಿಬಾಬು, ರೈಡ್ನಾಗರಾಜು, ಅಬ್ಬನಕುಪ್ಪೆರಮೇಶ್, ಹೊಸೂರುರಾಜಣ್ಣ, ಗೋವಿಂದ ರಾಜು, ಹೊಂಬೇಗೌಡ, ಗಂಗಾಧರ್, ಹಾಪ್ಕಾಮ್ಸ್ ಪುಟ್ಟಸ್ವಾಮಿ ಮತ್ತಿತರರು ಹಾಜರಿದ್ದರು.

8ಕೆಆರ್ ಎಂಎನ್ 6.ಜೆಪಿಜಿ

ಕಳ್ಳಿಹೊಸೂರು ಗ್ರಾಮದ ಅಶೋಕ್ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾದರು.

-------------------------