ಎಐ ಟೆಕ್ನಾಲಜಿ ಬಂದ ಮೇಲೆ ಸಾಕಷ್ಟು ರೀತಿಯಲ್ಲಿ ಬದಲಾವಣೆಯಾಗುತ್ತಿದೆ. ಅದರಿಂದ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಏನೂ ಮಾಡಲು ಸಾಧ್ಯವಿಲ್ಲ
ಗಂಗಾವತಿ: ರಾಮಮಂದಿರ ಟ್ರಸ್ಟ್ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ, ಲೆಕ್ಕ ಕೇಳುವ ನೈತಿಕತೆ ಕಾಂಗ್ರೆಸ್ಸಿನವರಿಗೆ ಇಲ್ಲ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಗಂಗಾವತಿ ವಿಧಾನಸಭಾ ಕ್ಷೇತ್ರದ ಚಿಕ್ಕ ಬೊಮ್ಮನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 500 ವರ್ಷಗಳ ಇತಿಹಾಸ ಇದೆ. ರಾಮ ಭಕ್ತ ಹನುಮನನ್ನು ಬಿಟ್ಟರೆ ಮತ್ತೆ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ ಭಕ್ತರು ಎಂದರು.ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕುರಿತು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರು ಅಡಿಯೋ ವೈರಲ್ ಪ್ರಶ್ನೆಗೆ ಉತ್ತರಿಸಿ ಜನಾರ್ದನ ರೆಡ್ಡಿ, ಸದಾನಂದಗೌಡ ಅವರು ನಿಷ್ಠಾವಂತ ನಾಯಕರಾಗಿದ್ದಾರೆ. ಆ ಆಡಿಯೋ ತಮಗೆ ಸಂಬಂಧಿಸಿದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಪದೇ ಪದೇ ಹೇಳಿಕೆ ನೀಡುವುದು ಸರಿಯಲ್ಲ. ಎಐ ಟೆಕ್ನಾಲಜಿ ಬಂದ ಮೇಲೆ ಸಾಕಷ್ಟು ರೀತಿಯಲ್ಲಿ ಬದಲಾವಣೆಯಾಗುತ್ತಿದೆ. ಅದರಿಂದ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಸಿಎಂ ಡಿ.ಕೆ.ಶಿವಕುಮಾರ ರಿಯಲ್ ಎಸ್ಟೇಟ್ ಅಂದರೆ ಹೆಚ್ಚಿನ ಗಮನಹರಿಸುತ್ತಿದ್ದಾರೆ. ಈಗಾಗಲೇ ಬಿಡದಿ ವಿಷಯ ನ್ಯಾಯಾಲಯ ಮೆಟ್ಟಿಲು ಏರಿದೆ. ಕಾರಣ ಬಿಡದಿ ವಿಷಯ ಬಿಟ್ಟು ಅವರು ರಾಜ್ಯದ ಹಿತ ಕಾಪಾಡಲು ಮುಂದಾಗಲಿ ಎಂದರು.