ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಉಮೇಶ್ ಕಾರಜೋಳ

| Published : Dec 20 2024, 12:45 AM IST

ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಉಮೇಶ್ ಕಾರಜೋಳ
Share this Article
  • FB
  • TW
  • Linkdin
  • Email

ಸಾರಾಂಶ

Congress lacks the morals to talk about Ambedkar: Umesh Karajola

-ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ

------

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷದವರಿಗೆ ಇಲ್ಲ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಹೇಳಿದರು.

ಪತ್ರಿಕಾ ಹೇಳಿಕೆ ನೀಡಿರುವ ಅವರು ಅಂಬೇಡ್ಕರ್ ಅವರ ಜೀವಿತಾವಧಿಯ ಕಾಲದಲ್ಲಿ ಅವರನ್ನು ನಿರಂತರ ಅಪಮಾನಿಸಿ ಅವರ ಅರ್ಹತೆ, ವಿದ್ವತ್ತನ್ನು ಗೌರವಿಸದೇ ಅವರನ್ನು ರಾಜಕೀಯವಾಗಿ, ಸಾಮಾಜಿಕವಾಗಿ ತುಳಿದು ಅವರನ್ನು ಚುನಾವಣೆಯಲ್ಲಿ ಸೋಲಿಸಿ ಬಳಿಕ ಅವರನ್ನು ಸೋಲಿಸಿದವರಿಗೆ ಕಾಂಗ್ರೆಸ್ ಪಕ್ಷ ಪದ್ಮಭೂಷಣ ನೀಡಿ ಗೌರವಿಸಿತ್ತು. ಕಾಂಗ್ರೆಸ್ ಶೋಷಿತರನ್ನು ಮತ ಬ್ಯಾಂಕ್ ಮಾಡಿಕೊಂಡು ಇದುವರೆಗೂ ಅಧಿಕಾರದ ಸವಿ ಅನುಭವಿಸುತ್ತಾ ಬಂದಿದೆ.

ಅಂಬೇಡ್ಕರ್ ಅವರ ನಿಧನದ ನಂತರ ಅವರ ಪಾರ್ಥಿವ ಶರೀರ ಮಣ್ಣು ಮಾಡಲು ದೆಹಲಿಯಲ್ಲಿ ಕನಿಷ್ಠ ಅಡಿಯ ಜಾಗವನ್ನು ನೀಡದೆ ಮುಂಬೈಗೆ ಅವರ ದೇಹ ಸಾಗಿಸುವ ವ್ಯವಸ್ಥೆಯನ್ನೂ ಮಾಡದೆ ಅವರನ್ನು ತಾತ್ಸಾರವಾಗಿ ನೋಡಿಕೊಂಡ ಕಾಂಗ್ರೆಸ್ಸಿಗರಿಗೆ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕು ಇಲ್ಲ.

ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಿ ಗೌರವಿಸಿದ ಹೆಗ್ಗಳಿಕೆ ಭಾರತೀಯ ಜನತಾ ಪಾರ್ಟಿಯದ್ದು. ಅಂಬೇಡ್ಕರ್ ಅವರ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಯುವಂತೆ ಸಂವಿಧಾನ ದಿನವನ್ನು ಆಚರಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದು ಭಾರತೀಯ ಜನತಾ ಪಾರ್ಟಿ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸಿಗರು ಅಂದು ಅಂಬೇಡ್ಕರ್ ಅವರನ್ನು ಅವಮಾನಿಸಿ ಇಂದು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಪಠಿಸುತ್ತಿರುವ ಕಾಂಗ್ರೆಸ್ಸಿಗರ ಗೋಮುಖ ವ್ಯಾಘ್ರತನವನ್ನು ಬಯಲು ಮಾಡುವ ನಿಟ್ಟಿನಲ್ಲಿ ಆಡಿದ ಮಾತುಗಳನ್ನು ತಿರುಚುವ ಮೂಲಕ ಅಪಪ್ರಚಾರ ನಡೆಸಿ ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿರುವ ಕಾಂಗ್ರೆಸ್ಸಿಗರ ನಡೆ ನಾಚಿಕೆಗೇಡಿನ ತನದ ಪರಮಾವಧಿಯಾಗಿದೆ ಎಂದಿದ್ದಾರೆ.

----

ಫೋಟೊ: ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ