ಮುಖ್ಯ ನಿಧನ))) ಕಾಂಗ್ರೆಸ್‌ ಮುಖಂಡ ಡಿ.ಆರ್. ರಾಜು ಇನ್ನಿಲ್ಲ

| Published : Nov 19 2024, 12:48 AM IST

ಸಾರಾಂಶ

ಡಿ.ಆ‌ರ್. ರಾಜು, ತಮ್ಮ ರಶ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿವೇತನ ಸೇರಿದಂತೆ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಕಾರ್ಕಳ: ಕಾಂಗ್ರೆಸ್‌ ಮುಖಂಡ ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಡಿ.ಆರ್. ರಾಜು (65) ಹೃದಯಾಘಾತದಿಂದ ಭಾನುವಾರ ರಾತ್ರಿ ನಿಧನರಾದರು.

ಭಾನುವಾರ ಅವರು ಕಾರ್ಕಳ ಹಾಗೂ ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಡಿ.ಆ‌ರ್. ರಾಜು, ತಮ್ಮ ರಶ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿವೇತನ ಸೇರಿದಂತೆ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಅನೇಕ ಮುಖಂಡರು ಆಗಮಿಸಿ ಅಂತಿಮ ದರ್ಶನ ಪಡೆದರು.ಸುನಿಲ್ ಕುಮಾರ್ ಸಂತಾಪ: ನೇರ ನಡೆ–ನುಡಿಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರು, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರು ಡಿ. ಆರ್ ರಾಜು ಅವರ ಅಗಲುವಿಕೆಯಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಸಂತಾಪ ಸೂಚಿಸಿದರು.