ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ ಅನಿತಾ ಕಾಸರಗೋಡು ಎಂಬ ಹೆಸರಿನವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವಂತಿದೆ. ಇಂತಹ ಅಮಾನವೀಯ ಕೃತ್ಯವು ಪ್ರತಿಯೊಬ್ಬ ಶಾಂತಿಪ್ರಿಯ ನಾಗರಿಕನಿಗೂ ನೋವನ್ನು ಉಂಟುಮಾಡಿದೆ ಎಂದು ಕಾಂಗ್ರೆಸ್‌ ಮುಖಂಡ ಪದ್ಮರಾಜ್‌ ಆರ್‌. ಪೂಜಾರಿ ಹೇಳಿದ್ದಾರೆ.

ಮಂಗಳೂರು: ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ ಅನಿತಾ ಕಾಸರಗೋಡು ಎಂಬ ಹೆಸರಿನವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವಂತಿದೆ. ಇಂತಹ ಅಮಾನವೀಯ ಕೃತ್ಯವು ಪ್ರತಿಯೊಬ್ಬ ಶಾಂತಿಪ್ರಿಯ ನಾಗರಿಕನಿಗೂ ನೋವನ್ನು ಉಂಟುಮಾಡಿದೆ ಎಂದು ಕಾಂಗ್ರೆಸ್‌ ಮುಖಂಡ ಪದ್ಮರಾಜ್‌ ಆರ್‌. ಪೂಜಾರಿ ಹೇಳಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕೂಡಲೇ ಮಧ್ಯಪ್ರವೇಶಿಸಿ, ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಶಕ್ತಿ ನಮ್ಮ ನಾಡಿನ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದರೆ, ಅದನ್ನು ನಾವು ಸಹಿಸಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಅಂತಹ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಲೇಬೇಕು. ಪ್ರತಿಯೊಬ್ಬರೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ಈ ಮೂಲಕ ಮನವಿ ಮಾಡುತ್ತೇನೆ ಎಂದು - ಪದ್ಮರಾಜ್ ಆರ್. ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.