ಸಾರಾಂಶ
ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್‌ಗಾಂಧಿ ಅವರು ಬುಧವಾರ (ಏ.೧೭) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ಇತರರು ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್‌ಗಾಂಧಿ ಅವರು ಬುಧವಾರ (ಏ.೧೭) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ತಿಳಿಸಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ಇತರರು ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಹುಲ್‌ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಪರವಾಗಿ ಮತಯಾಚಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ವಿದ್ಯಾರ್ಥಿಗಳು, ರೈತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿದರು. ಶಾಸಕ ಜಿ.ಟಿ.ದೇವೇಗೌಡ ಅವರು ಗ್ಯಾರಂಟಿ ಯೋಜನೆಗಳ ಕೋಟ್ಯಂತರ ಫಲಾನುಭವಿಗಳು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವುದನ್ನು ಮುಖಂಡ ಡಿ.ಎಲ್.ಶಂಕರಲಿಂಗೇಗೌಡ ಖಂಡಿಸಿದರು.
ಮುಖಂಡರಾದ ಲಕ್ಷ್ಮೀ ವನರಾಜ್, ಶ್ರೀಕಂಠಯ್ಯ, ಭಾಷಾಖಾನ್, ಗೀತಾ, ಬಾಲಾಜಿ ಗೋಷ್ಠಿಯಲ್ಲಿದ್ದರು.