ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮೊಹಮ್ಮದ್ ರೋಷನ್ ಷಾ ಅವರು ₹15 ಸಾವಿರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದ್ದಾರೆ. ಜ.14ರಂದು ರಾಜೀವ್ ಗೌಡ ಅವರ ಮೇಲೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ರಾಜೀವ್ ಗೌಡ ಅವರ ಪರ ವಕಾಲತ್ತು ವಹಿಸಿದ್ದರು.
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಶಿಡ್ಲಘಟ್ಟ ಜೆ.ಎಂ.ಎಫ್.ಸಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಕಳೆದ ಮೂರು ದಿನಗಳಿಂದಲೂ ನ್ಯಾಯಾಂಗ ಬಂಧನ ಮತ್ತು ಪೊಲೀಸ್ ಕಸ್ಟಡಿದಲ್ಲಿದ್ದ ರಾಜೀವ್ ಗೌಡ ಅವರಿಗೆ ಬಿಡುಗಡೆ ಭಾಗ್ಯ ದೊರೆತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಸಂಭ್ರಮಾಚರಣೆ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದೆ.ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮೊಹಮ್ಮದ್ ರೋಷನ್ ಷಾ ಅವರು ₹15 ಸಾವಿರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದ್ದಾರೆ. ಜ.14ರಂದು ರಾಜೀವ್ ಗೌಡ ಅವರ ಮೇಲೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ರಾಜೀವ್ ಗೌಡ ಅವರ ಪರ ವಕಾಲತ್ತು ವಹಿಸಿದ್ದರು.
---------