ಚಂದಗಾಲು ವಿಜಯ್‌ಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರೆನಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಆಯಾ ಕಾಲಘಟ್ಟದಲ್ಲಿ ಸಮರ್ಥವಾಗಿ ನಿಭಾಯಿಸುವಲ್ಲೂ ಯಶಸ್ವಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಕಾಂಗ್ರೆಸ್ ಮುಖಂಡ ಚಂದಗಾಲು ವಿಜಯ್‌ಕುಮಾರ್ ಹುಟ್ಟುಹಬ್ಬವನ್ನು ಮುಖಂಡರು ಮತ್ತು ಅಭಿಮಾನಿಗಳು ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಿದರು.

ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮಾತನಾಡಿ, ಚಂದಗಾಲು ವಿಜಯ್‌ಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರೆನಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಆಯಾ ಕಾಲಘಟ್ಟದಲ್ಲಿ ಸಮರ್ಥವಾಗಿ ನಿಭಾಯಿಸುವಲ್ಲೂ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ನಾಯಕರೆಲ್ಲರ ವಿಶ್ವಾಸ ಗಳಿಸಿಕೊಂಡು ಮುನ್ನಡೆಯುತ್ತಿದ್ದಾರೆ ಎಂದರು.

ಪಕ್ಷದ ಹಿರಿಯ ಮುಖಂಡರೆನಿಸಿಕೊಂಡಿರುವ ಅವರಿಗೆ ಪಕ್ಷದೊಳಗೆ ಜವಾಬ್ದಾರಿಯುತ ಸ್ಥಾನವನ್ನು ನೀಡುವುದರ ಜೊತೆಗೆ ನಿಗಮ-ಮಂಡಳಿಗಳಲ್ಲಿ ಅವರಿಗೆ ಸ್ಥಾನ-ಮಾನಗಳು ದೊರಕಿದರೆ ಪಕ್ಷಕ್ಕೆ ಇನ್ನಷ್ಟು ನಿಷ್ಠೆಯಿಂದ ದುಡಿಯಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಿಸಿದರು.

ಮುಖಂಡ ಸೋಮಶೇಖರ್ ಕೆರಗೋಡು ಮಾತನಾಡಿ, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರಾಗಿರುವ ವಿಜಯಕುಮಾರ್ ಆರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪಕ್ಷ ನಿಷ್ಠೆಗೆ ಹೆಸರಾಗಿದ್ದಾರೆ. ಅವರಿಗೆ ಮತ್ತಷ್ಟು ಉನ್ನತ ರಾಜಕೀಯ ಸ್ಥಾನ-ಮಾನಗಳು ದೊರೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ನಗರಸಭೆ ಮಾಜಿ ಸದಸ್ಯ ಶ್ರೀಧರ್, ಸೇವಾದಳ ಅಧ್ಯಕ್ಷ ಕೃಷ್ಣೇಗೌಡ, ಮೇಲುಕೋಟೆ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಚಿನಕುರಳಿ ರಮೇಶ್, ಕೆ.ಸಿ.ಪ್ರಶಾಂತ್‌ಬಾಬು, ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪಾಪಣ್ಣ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಇತರರಿದ್ದರು.

ಗಿಡನೆಟ್ಟು ನೀರುಣಿಸಿ ಕರವೇ ನಾರಾಯಣಗೌಡರ ಹುಟ್ಟುಹಬ್ಬ

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹುಟ್ಟುಹಬ್ಬವನ್ನು ತಾಲೂಕು ಅಧ್ಯಕ್ಷ ಜಿ.ಜಿ ಹರೀಶ್‌ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಗಂಜಾಂನ ರಸ್ತೆ ಬದಿಗಳಲ್ಲಿ ಗಿಡ ನೆಟ್ಟು ನೀರುಣಿಸುವ ಮೂಲಕ ಆಚರಿಸಿದರು.

ನಂತರ ಹರೀಶ್‌ಗೌಡ ಮಾತನಾಡಿ, ನಾರಾಯಣಗೌಡರು ಕನ್ನಡ ನಾಡು, ನುಡಿ, ಜಲದ ರಕ್ಷಣೆ ಹಾಗೂ ಕನ್ನಡಿಗರಿಗೆ ಅನ್ಯಾಯವಾದಲ್ಲಿ ನಿರಂತರ ದ್ವನಿ ಎತ್ತುತ್ತಿದ್ದಾರೆ. ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹಾಗೂ ಹೊರಭಾಷಿಗರಿಂದ ಕನ್ನಡಕ್ಕೆ ಧಕ್ಕೆಯಾಗುವುದನ್ನು ತಡೆಹಿಡಿದಿದ್ದಾರೆ ಎಂದರು.ಕಾವೇರಿ ನದಿ ನೀರು, ಬೆಳಗಾಗಿ ಗಡಿ ವಿವಿದ ಹಾಗೂ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆ ಸೇರಿದಂಥೆ ಅನೇಕ ಮಹತ್ವದ ಹೋರಾಟಗಳು ಸೇರಿದಂತೆ ಚಳವಳಿಗಳಿಂದ ಕನ್ನಡದ ಮನೆ ಮಾತಾಗಿದ್ದಾರೆ ಎಂದರು.

ಈ ವೇಳೆ ಮಹಿಳಾ ಅಧ್ಯಕ್ಷೆ ಸರಸ್ವತಿ, ಶೀಲಾ ನಂಜುಂಡಯ್ಯ, ಫಾತಿಮಾ, ಮಲ್ಲುಸ್ವಾಮಿ, ಗಂಜಾಂ ಅಭಿಷೇಕ್, ಕಿಟ್ಟಿ, ಸಾಹಿತಿ ಕೌಡ್ಲೆ ಚೆನ್ನಪ್ಪ, ಬಸವರಾಜು, ಬಾಬು, ಹರೀಶ್ ಸೇರಿದಂತೆ ಇತರರು ಇದ್ದರು.