ಸಿಎಂ ಸಿದ್ದರಾಮಯ್ಯ ಪರ ಕೈ ಮುಖಂಡರ ಬ್ಯಾಟಿಂಗ್

| Published : Aug 18 2024, 01:45 AM IST

ಸಾರಾಂಶ

ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶನಿವಾರ ಮಾಧ್ಯಮದ ಜೊತೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಯಳಂದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ಖಂಡಿಸಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಕಿಡಿಕಾರಿದ್ದಾರೆ.ಯಳಂದೂರಿನಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ನಿರಪರಾಧಿ, ಮುಡಾದಲ್ಲಿ ಹಗರಣವೇ ಆಗಿಲ್ಲ. 100 ಬಾರಿ ಸುಳ್ಳನ್ನು ಸತ್ಯ ಎಂದು ಹೇಳಿ ಸತ್ಯವನ್ನೇ ಮಾಡಲು ಬಿಜೆಪಿ ಹೊರಟಿದೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಪರ ಹೈಕಮಾಂಡ್ ಇದೆ, ಬಿಜೆಪಿ ಆರೋಪಕ್ಕೆ ಸಮಾವೇಶ ನಡೆಸಿ ಉತ್ತರ ಕೊಟ್ಟಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ನಮಗೆ ನ್ಯಾಯದ ಮೇಲೆ ನಂಬಿಕೆ ಇದೆ ಎಂದರು.ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ರನ್ನು ಕೆಳಗಿಳಿಸಬೇಕೆಂದು ಕೇಂದ್ರ ಸರ್ಕಾರ ಇಡಿ ಬಳಸಿತ್ತು, ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗಳಿಗೆ, ಆರೋಪಗಳಿಗೆ ಉತ್ತರಿಸಲಾಗದೇ ಹಿಂದಿನ ಲೋಕ ಚುನಾವಣೆಯಲ್ಲಿ ಖರ್ಗೆ ಅವರನ್ನು ಬಿಜೆಪಿ ಸೋಲಿಸಿತ್ತು ಎಂದು ಕಿಡಿಕಾರಿದರು.ಅದೇ ರೀತಿ ಕರ್ನಾಟಕದಲ್ಲೂ ಕೂಡ ಸುಳ್ಳು ಆರೋಪಗಳನ್ನು ಬಿಜೆಪಿ ಮಾಡುತ್ತಿದೆ, ಸಿದ್ದರಾಮಯ್ಯ ಪರ ಹೈಕಮಾಂಡ್, ಶಾಸಕರು ಇದ್ದೇವೆ ಎಂದರು.ರಾಜ್ಯಪಾಲರು ರಾಜಕೀಯ ಏಜೆಂಟ್ ರೀತಿ ವರ್ತನೆ: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಕಿಡಿಕಾರಿದರು.ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು.ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮಾಜಿ ಶಾಸಕರು ಮುಖಂಡರು ಕಾರ್ಯಕರ್ತರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಯಲ್ಲಿಯೇ ಇದ್ದಾರೆ. ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.