ಪಾಂಡವಪುರ:
ತಾಲೂಕಿನ ದೇವೇಗೌಡನಕೊಪ್ಪಲು ಗೇಟ್ ಬಳಿ ರಾಮಬಾಣಕಾಲುವೆಯ ನಟರಾಜ್ ಅಂಗಡಿ ಬಳಿ ಚಿಕ್ಕಾಡೆ ಹಾಗೂ ದೇವೇಗೌಡನಕೊಪ್ಪಲು ಗ್ರಾಮಗಳ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್-ರೈತಸಂಘದ ಕಾರ್ಯಕರ್ತರು ವಿಶೇಷವಾಗಿ ಟಗರು ಬಲಿ ಕೊಟ್ಟು, ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಾಚರಣೆ ಮಾಡಿದರು.ಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ಭಾವಚಿತ್ರವುಳ್ಳ ಕಟೌಟ್ ಎದುರು ಅಭಿಮಾನಿಗಳು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಅವರ ಭಾವಚಿತ್ರದ ಎದುರು ಟಗರು ಕತ್ತರಿಸಿ ಸಂಭ್ರಮಿಸಿದರು. ಬಳಿಕ ಸ್ಥಳದಲ್ಲಿಯೇ ಮಾಂಸದ ಊಟ ಅಡುಗೆ ತಯಾರಿಸಿ ಕಾರ್ಯಕರ್ತರಿಗೆ ವಿತರಣೆ ಮಾಡುವ ಮೂಲಕ ಶುಭಹಾರೈಸಿದರು.
ಈ ವೇಳೆ ಡಿಕೆಶಿ ಅಭಿಮಾನಿಗಳಾದ ರವೀಂದ್ರ, ಶ್ರೀಕಾಂತ್, ಶರತ್, ಕೃಷ್ಣೇಗೌಡ, ಮಹೇಶ್, ನಟರಾಜು, ಮೋಹನ್, ಎನ್.ಕೆ.ಸ್ವಾಮೀಗೌಡ, ಕೇಬಲ್ ಹರೀಶ್, ನಟರಾಜು, ಜಗದೀಶ್, ಧರ್ಮರಾಜು, ಕೃಷ್ಣೇಗೌಡ, ರಾಘು ಸೇರಿದಂತೆ ಕಾಂಗ್ರೆಸ್-ರೈತಸಂಘದ ಕಾರ್ಯಕರ್ತರು ಹಾಜರಿದ್ದರು.ಡಿಕೆ ಸಿಎಂ ಆಗಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ: ಪಿ.ಎಂ.ನರೇಂದ್ರಸ್ವಾಮಿಕನ್ನಡಪ್ರಭ ವಾರ್ತೆ ಮಳವಳ್ಳಿಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವರಿಷ್ಠರ ಆದೇಶದಂತೆ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುತ್ತಿರುವುದು ದೇಶದ ಎಲ್ಲರಿಗೂ ಮಾದರಿಯಾಗಿದೆ ಎಂದರು.ಎಲ್ಲ ಕಾಂಗ್ರೆಸ್ಸಿಗರು ತ್ಯಾಗದ ಮನೋಭಾವನೆಯಲ್ಲಿ ದೇಶದ ಸಮಗ್ರತೆ, ಐಕ್ಯತೆ ಮತ್ತು ಅಭಿವೃದ್ಧಿಯೊಂದಿಗೆ ದೇಶವನ್ನು ಮುನ್ನಡೆಸಲು ಸಾಧ್ಯ ಎನ್ನುವುದನ್ನು ಅರ್ಥೈಸಿಕೊಳ್ಳಬೇಕಿದೆ. 2028ರ ಚುನಾವಣೆಯಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೋಡಿ ಕಾಂಗ್ರೆಸ್ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ಕಾಂಗ್ರೆಸ್ಸಿಗರ ಭಾವನಗಳಿಗೆ ಹೊಸ ಕೊಡುಗೆಯಾಗಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇದ್ದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ಪಕ್ಷದಲ್ಲಿ ಐಕ್ಯತೆ, ಬದ್ಧತೆ ಮತ್ತು ಸಹೋದರತ್ವತೆ ಹೇಗಿದೆ ಎನ್ನುವುದಕ್ಕೆ ಸಿದ್ದರಾಮಯ್ಯ ಅವರು ನಡೆದುಕೊಂಡ ರೀತಿ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.ಡಿ.ಕೆ.ಶಿವಕುಮಾರ್ ಹಾಗೂ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ಆಯ್ಕೆಯಾಗಿರುವುದು ಕಾಂಗ್ರೆಸ್‌ನಲ್ಲಿ ಒಮ್ಮತ, ಒಗ್ಗಟ್ಟು ಮತ್ತು ಜನಪರ ಕಾಳಜಿ ತೋರಿಸುತ್ತದೆ ಎಂದರು.
ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, ನನ್ನನ್ನು ಮಂತ್ರಿ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ತೀರ್ಮಾನವಾಗಿದೆ ಎಂದು ಸ್ವಷ್ಟಪಡಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ದಿಲೀಪ್ ಕುಮಾರ್(ವಿಶ್ವ) ಪಾಲ್ಗೊಂಡಿದ್ದರು.