ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜ್ಯದಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಮುಖಂಡರು ಹತಾಶರಾಗಿದ್ದು, ಪ್ರಧಾನಿ ಮೋದಿಯವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.ಲೋಕಸಭೆ ಚುನಾವಣೆ ನಿಮಿತ್ತ ನವನಗರದ 30ನೇ ವಾರ್ಡ್‌ನಲ್ಲಿ ನಡೆದ ವಾರ್ಡ್ ಸಭೆಯಲ್ಲಿ ಅವರು ಮಾತನಾಡಿದರು, ಬಿಜೆಪಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲುವ ಅವಕಾಶ ಹೆಚ್ಚಾಗಿರುವುದರಿಂದ ಕಾಂಗ್ರೆಸ್ ಹತಾಶರಾಗಿದ್ದಾರೆ. ಪ್ರಧಾನಿ ಮೋದಿಯವರ ಬಗ್ಗೆ ದಿನಕ್ಕೊಬ್ಬ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ, ಜನರಿಗೆ ಮೋದಿ ಏನೆಂಬುದು ಗೊತ್ತಿದೆ. ಬಿಜೆಪಿ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಅಭಿವೃದ್ಧಿ ಮಾಡದೆ ಈಗ ಅಭಿವೃದ್ಧಿ, ಬಡವರು, ರೈತರ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಕೇಂದ್ರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ರೈಲ್ವೆ ಯೋಜನೆಗಳು, ಬಾಗಲಕೋಟೆ ಹೊಸ ರೈಲ್ವೆ ನಿಲ್ದಾಣ ಅಭಿವೃದ್ಧಿಯ ಜೊತೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಉದ್ಯೋಗ ಸೃಜನ್ ಯೋಜನೆ, ಮುದ್ರಾ ಯೋಜನೆಯಂತಹ ಅನೇಕ ಯೋಜನೆಗಳ ಮೂಲಕ ರೈತರ, ಬಡವರ, ಯುವಕರ, ಕೂಲಿ ಕಾರ್ಮಿಕರ ಬದುಕಿರಿಗೆ ಶಕ್ತಿ ತುಂಬಲಾಗಿದೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರೋಣ, ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸೋಣ ಎಂದರು.
ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿರುವ ಬಗ್ಗೆ ಜನರಿಗೆ ಗೊತ್ತಿದೆ. ಇದು ದೇಶದ ಭದ್ರತೆ, ಸುರಕ್ಷತೆಗಾಗಿ ನಡೆಯುವ ಚುನಾವಣೆ, ದೇಶದ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ದೇಶದ ಸುರಕ್ಷತೆ ಹಾಗೂ ಭದ್ರತೆಗಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ತರುವ ಅಗತ್ಯವಿದೆ. ಎಲ್ಲರೂ ಬಿಜೆಪಿಗೆ ಮತ ನೀಡಿ ಶೀರ್ವದಿಸಿದ ಎಂದು ಮನವಿ ಮಾಡಿದರು.ಸಭೆಯಲ್ಲಿ ಮಾಜಿ ಬಿಟಿಡಿಎ ಅಧ್ಯಕ್ಷ ಜಿ.ಎನ್. ಪಾಟೀಲ, ಬಸವರಾಜ ಯಂಕಂಚಿ, ಅಶೋಕ ಗದ್ದನಕೇರಿ, ವಿಶ್ವನಾಥ ಸೋರಗಾಂವಿ, ಪ್ರಭು ಹಡಗಲಿ, ಕುಮಾರ ಯಳ್ಳೀಗುತ್ತಿ, ಯಲ್ಲಪ್ಪ ಬೆಂಡಿಗೇರಿ, ಸಂತೋಷ ಅಂಬಿಗೇರ, ಕಸ್ತೂರಿ ಪಲ್ಲೇದ, ಸಾವಿತ್ರಿ ಬಣಕಾರ, ಸಂದೀಪ ಜಾಧವ, ಸುರೇಶ ಕಮ್ಮಾರ, ನಗರಸಭೆ ಸದಸ್ಯ ಚೆನ್ನಯ್ಯ ಹಿರೇಮಠ, ಬಾಬು ಭೋವಿ, ಬಸವರಾಜ ಹೆಳವರ, ಅನಂತ ಕುಲಕರ್ಣಿ,ರಾಕೇಶ ಕರಿಗಾರ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬಿಜೆಪಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲುವ ಅವಕಾಶ ಹೆಚ್ಚಾಗಿರುವುದರಿಂದ ಕಾಂಗ್ರೆಸ್ ಹತಾಶರಾಗಿದ್ದಾರೆ. ಪ್ರಧಾನಿ ಮೋದಿಯವರ ಬಗ್ಗೆ ದಿನಕ್ಕೊಬ್ಬ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ, ಜನರಿಗೆ ಮೋದಿ ಏನೆಂಬುದು ಗೊತ್ತಿದೆ.-ಪಿ.ಸಿ.ಗದ್ದಿಗೌಡರ, ಬಿಜೆಪಿ ಅಭ್ಯರ್ಥಿ