ಸಾರಾಂಶ
ಹಲವಾರು ಹಿರಿಯರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಇಂದಿನ ಯುವ ಪೀಳಿಗೆ ದೇಶದ ರಕ್ಷಣೆಗೆ ಪಣ ತೊಡಬೇಕು, ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಮುಂದಾಗಬೇಕು.
ಕನ್ನಡಪ್ರಭ ವಾರ್ತೆ ಮದ್ದೂರು
79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆಯೊಂದಿಗೆ ಪಟ್ಟಣದಲ್ಲಿ ಶುಕ್ರವಾರ ಜಾಥಾ ನಡೆಸಿದರು.ಎಐಸಿಸಿ ಸೂಚನೆ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ನಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಬಳಿಕ ಕಾಂಗ್ರೆಸ್ ಕಚೇರಿಯಿಂದ ಕಾರ್ಯಕರ್ತರು ರಾಷ್ಟ್ರಧ್ವಜಗಳನ್ನು ಹಿಡಿದು ಧ್ವಜ ಸತ್ಯಾಗ್ರಹ ಸೌಧದವರೆಗೆ ಪಥ ಸಂಚಲನ ನಡೆಸುವುದರೊಂದಿಗೆ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಘೋಷಣೆ ಕೂಗಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜು ಮಾತನಾಡಿ, ಹಲವಾರು ಹಿರಿಯರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಇಂದಿನ ಯುವ ಪೀಳಿಗೆ ದೇಶದ ರಕ್ಷಣೆಗೆ ಪಣ ತೊಡಬೇಕು, ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಹೇಳಿದರು.
ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಬ್ಲಾಕ್ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ಕೀರ್ತಿ, ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಮಹದೇವಪ್ಪ, ಪುರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.