ಸಾರಾಂಶ
ಸಿ ಅಂಡ್ ಡಿ ಲ್ಯಾಂಡ್ ಸರ್ವೆ ವಿರೋಧಿಸಿ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಿ ಆಂಡ್ ಡಿ ಲ್ಯಾಂಡ್ ಸರ್ವೇ ವಿರೋಧಿಸಿ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ಮುಂದಿನ ಹತ್ತು ದಿನಗಳೊಳಗೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.ಸೋಮವಾರಪೇಟೆ ತಾಲೂಕು ರೈತ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್ ಗೆ ಉತ್ತಮ ಜನ ಬೆಂಬಲ ವ್ಯಕ್ತವಾಗಿತ್ತು. ಈ ಸಂರ್ದಭ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು.
ಈ ಸಂದರ್ಭ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ , ನಿಯೋಗದಲ್ಲಿ ಕಾಂಗ್ರೆಸ್ ಮುಖಂಡ, ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ ,ಕೆ.ಪಿ.ಚಂದ್ರಕಲಾ, ಕೆ.ಎಂ ಲೋಕೇಶ್, ಬಿ.ಬಿಸತೀಶ್ , ವಿ.ಪಿ ಶಶಿಧರ್, ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ, ಚೇತನ್ ಸೇರಿದಂತೆ ಮತ್ತಿತರು ಹಾಜರಿದ್ದರು.