ಸಾರಾಂಶ
ಶಿಕ್ಷಕರ ಜೊತೆ ಸದಾ ಇದ್ದು, ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನದ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಿರುವ ಮರಿತಿಬ್ಬೇಗೌಡರನ್ನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಾದ ಅನಿವಾರ್ಯ ಇದೆ.
ಕನ್ನಡ ಪ್ರಭ ವಾರ್ತೆ ಮಳವಳ್ಳಿ
ದಕ್ಷಿಣ ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಮುಖಂಡರು ಪಟ್ಟಣದ ಮಹದೇಶ್ವರ ಪ್ರೌಢಶಾಲೆಯಲ್ಲಿ ಮತಯಾಚನೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ಶಿಕ್ಷಕರ ಜೊತೆ ಸದಾ ಇದ್ದು, ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನದ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಿರುವ ಮರಿತಿಬ್ಬೇಗೌಡರನ್ನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಾದ ಅನಿವಾರ್ಯ ಇದೆ ಎಂದರು.
ರಾಜ್ಯದ ಶಿಕ್ಷಕ ಸಮುದಾಯದ ಪ್ರತಿನಿಧಿಯಾಗಿ ಶಿಕ್ಷಣ ಕ್ಷೇತ್ರದ ಘನತೆ ಮತ್ತು ಶಿಕ್ಷಕರ ಆತ್ಮಗೌರವಕ್ಕೆ ಕಿಂಚಿತ್ತು ಚ್ಯುತಿಯಾಗದಂತೆ ದುಡಿದಿರುವ ಮರಿತಿಬ್ಬೇಗೌಡರು ಮುಂದಿನ ದಿನಗಳಲ್ಲಿಯೂ ಶಿಕ್ಷಕರ ಸಮಸ್ಯೆಗಳ ನಿವಾರಣೆಗಾಗಿ ನಿರಂತರವಾಗಿ ಶ್ರಮಿಸಲಿದ್ದಾರೆ ಎಂದರು.ಮರಿತಿಬ್ಬೇಗೌಡರ ಅವಿಶ್ರಾಂತ ದುಡಿಮೆ, ನಿಸ್ವಾರ್ಥ, ನಿಷ್ಪಕ್ಷಪಾತ, ನಿರ್ಭಿತ ಮನೋಧರ್ಮ, ಅವರ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ನಿಷ್ಕಳಂಕ ವ್ಯಕ್ತಿತ್ವದಿಂದಲೇ 4ನೇ ಬಾರಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದುರು.
ತಾಲೂಕಿನಿಂದ ಹೆಚ್ಚಿನ ಮತಗಳು ಕೊಡಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಂಡೋಪ ತಂಡವಾಗಿ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಭೇಟಿಕೊಟ್ಟು ಮತಯಾಚನೆ ಮಾಡಲಾಗುತ್ತಿದೆ ಎಂದು ಹೇಳಿದರು.ಈ ವೇಳೆ ಪುರಸಭೆ ಸದಸ್ಯರಾದ ರಾಜಶೇಖರ್, ಶಿವಸ್ವಾಮಿ, ಮಾಜಿ ಸದಸ್ಯರಾದ ಕಿರಣ್‌ಶಂಕರ್, ಕೃಷ್ಣ, ಎಚ್ ಬಸವರಾಜು, ಮುಖಂಡರಾದ ಮಾರೇಹಳ್ಳಿ ಬಸವರಾಜು, ವೆಂಕಟೇಶ್ ಸೇರಿದಂತೆ ಇತರರು ಇದ್ದರು.