ಸಾರಾಂಶ
ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು
ಕನ್ನಡಪ್ರಭ ವಾರ್ತೆ ಸಾಗರ
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಹಿನ್ನೆಲೆ ಮಂಗಳವಾರ ರಾತ್ರಿ ಬಿಜೆಪಿ ವತಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಹರಿಯಾಣದಲ್ಲಿ ಸೋತು ಸುಣ್ಣವಾಗಿದೆ. ಜಮ್ಮು ಕಾಶ್ಮೀರದಲ್ಲಿ ನಾವು ಗೆದ್ದೀದ್ದೇವೆ ಎಂದು ಕಾಂಗ್ರೇಸ್ ಬೀಗುತ್ತಿದೆ. ಆದರೆ ಜಮ್ಮು ಕಾಶ್ಮೀರದಲ್ಲಿ ಗೆದ್ದಿರುವುದು ಎನ್‌ಸಿಪಿ ಹೊರತು ಕಾಂಗ್ರೆಸ್ ಪಕ್ಷವಲ್ಲ. ಒಂದರ್ಥದಲ್ಲಿ ಕಾಂಗ್ರೆಸ್ ಪಕ್ಷ ಎರಡೂ ಕಡೆ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜಿನಾಮೆ ಕೊಡುವುದು ಖಚಿತ. ಕರ್ನಾಟಕದಲ್ಲಿ ಸಹ ಕಾಂಗ್ರೆಸ್ ಹೆಚ್ಚುದಿನ ಉಳಿಯುವುದಿಲ್ಲ. ಚುನಾವಣೆ ನಡೆದರೆ ಕರ್ನಾಟಕದಲ್ಲಿ ಸಹ ಬಿಜೆಪಿ150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಗಣೇಶ್ ಪ್ರಸಾದ್ ಮಾತನಾಡಿ, ಎರಡೂ ಕಡೆ ಬಿಜೆಪಿ ಹೀನಾಯ ಪ್ರದರ್ಶನ ಕೊಡುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಕರ್ನಾಟಕದಲ್ಲೂ ಸಹ ಕಾಂಗ್ರೆಸ್‌ನ ಒಂದೊಂದೆ ಭ್ರಷ್ಟಾಚಾರ ಬಯಲಿಗೆ ಬರುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಸಹ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ ಎಂದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಶ್ರೀನಿವಾಸ್ ಮೇಸ್ತ್ರಿ, ವಿ.ಮಹೇಶ್, ಕೆ.ಎಸ್.ಪ್ರಶಾಂತ್, ಮೈತ್ರಿ ಪಾಟೀಲ್, ರಾಜೇಂದ್ರ ಪೈ, ಸಂತೋಷ್, ಭಾವನಾ ಸಂತೋಷ್ ಇನ್ನಿತರರು ಹಾಜರಿದ್ದರು.