ಸಾರಾಂಶ
ನಗರದ ಮಹಾನಗರ ಪಾಲಿಕೆ ಎದುರಿನ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಪಾದಯಾತ್ರೆ ಆರಂಭಗೊಂಡಿತು. ಅಲ್ಲಿಂದ ಲೇಡಿಹಿಲ್ ಮಾರ್ಗವಾಗಿ ಮಣ್ಣಗುಡ್ಡೆ ಗಾಂಧಿ ಪಾರ್ಕ್‌ವರೆಗೆ ಪಾದಯಾತ್ರೆಯಲ್ಲಿ ಬಂದು ಮಗದೊಮ್ಮೆ ಅಲ್ಲಿನ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜನ್ಮದಿನಾಚರಣೆ ಹಾಗೂ ಗಾಂಧೀಜಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳ ಸಂಭ್ರಮದ ಕಾರ್ಯಕ್ರಮದ ಪ್ರಯುಕ್ತ ಮಂಗಳೂರು ನಗರ ಹಾಗೂ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಪಾದಯಾತ್ರೆ ನಡೆಸಿ ಗಾಂಧೀಜಿ ಪ್ರತಿಮೆಗೆ ಗೌರವಾರ್ಪಣೆ ಸಲ್ಲಿಸಲಾಯಿತು. ನಗರದ ಮಹಾನಗರ ಪಾಲಿಕೆ ಎದುರಿನ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಪಾದಯಾತ್ರೆ ಆರಂಭಗೊಂಡಿತು. ಅಲ್ಲಿಂದ ಲೇಡಿಹಿಲ್ ಮಾರ್ಗವಾಗಿ ಮಣ್ಣಗುಡ್ಡೆ ಗಾಂಧಿ ಪಾರ್ಕ್‌ವರೆಗೆ ಪಾದಯಾತ್ರೆಯಲ್ಲಿ ಬಂದು ಮಗದೊಮ್ಮೆ ಅಲ್ಲಿನ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದರು.ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ, ಗಾಂಧೀಜಿ ಕೇವಲ ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೆ ನಾಯಕರಾಗಿದ್ದರು. ಸತ್ಯ, ಅಹಿಂಸೆ, ಶಾಂತಿಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರ ಧೈರ್ಯ, ನಾಯಕತ್ವ, ವ್ಯಕ್ತಿತ್ವ ಮತ್ತು ಸರಳತೆ ಜಗತ್ತಿಗೇ ಮಾದರಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಬ್ಲಾಕ್ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲೀಂ ಮಾತನಾಡಿದರು. ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ಟಿ.ಕೆ. ಸುಧೀರ್, ಅಶೋಕ್ ಕುಮಾರ್ ಡಿ.ಕೆ. ಮತ್ತಿತರರು ಇದ್ದರು.