ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ

ಉಡುಪಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಕೇಂದ್ರ ಸರಕಾರ ರಾಮ್ ಜಿ ಎಂದು ಬದಲಾಯಿಸಿ ಯೋಜನೆಯನ್ನು ದುರುಪಯೋಗಪಡಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಆರೋಪಿಸಿದ್ದಾರೆ.ಅವರು ಬುಧವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, ಕೇಂದ್ರ ಬಿಜೆಪಿ ಸರ್ಕಾರ ಮನರೇಗಾ ಯೋಜನೆಯನ್ನು ಬದಲಿಸುವ ಮೂಲಕ ಜನಸಾಮಾನ್ಯರಿಗೆ ದೊರಕುವ ಉದ್ಯೋಗ ಖಾತ್ರಿಯನ್ನು ಕಸಿದುಕೊಂಡಿದೆ ಮತ್ತು ಪಂಚಾಯತ್ ಮಟ್ಟದಲ್ಲಿ ಇದ್ದ ಅಧಿಕಾರ ವನ್ನು ಕಿತ್ತುಕೊಳ್ಳುವ ಹುನ್ನಾರ ನಡೆಸಿದೆ. ಕೇಂದ್ರ ಸರಕಾರದ ಈ ಪಿತೂರಿಯನ್ನು ನಾವು ವಿರೋಧಿಸಬೇಕು ಎಂದರುˌಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಯೊಜನೆಯಿಂದ ಜನಸಾಮಾನ್ಯರಿಗಾಗುವ ಪ್ರಯೋಜನ ಕಿತ್ತುಕೊಂಡು ಪಟಪದ್ರ ಹಿತಾಸಕ್ತಿಗಳಿಗೆ ಈ ಯೋಜನೆಯ ಲಾಭ ಸಿಗುವಂತೆ ಮಾಡಲಾಗಿದೆ ಇದನ್ನು ನಾವು ತೀವ್ರವಾಗಿ ವಿರೋಧಿಸಬೇಕು ಎಂದರುˌ

ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್‌ನ ವಿವಿಧ ಸಮಿತಿಗಳ ಪದಾಧಿಕಾರಿಗಳಾಗಿ ಆಯ್ಕೆಯಾದ ಗೀತಾ ವಾಗ್ಳೆ, ಜೇಬಾ ಸೆಲ್ವನ್, ಭಾನು ಭಾಸ್ಕರ್, ಅನಿತಾ ಡಿ "ಸೋಜ, ಹಬೀಬ್ ಆಲಿ, ಚಂದ್ರಶೇಖರ್ ಮೆಂಡನ್ ಅವರನ್ನು ಗೌರವಿಸಲಾಯಿತುಸಭೆಯಲ್ಲಿ ಕರಾವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ .ಎ .ಗಪೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಮುಖರಾದ ದಿನೇಶ ಹೆಗ್ಡೆ ಮೊಳವಳ್ಳಿ, ಉದಯಕುಮಾರ್ ಶೆಟ್ಟಿ ಮುನಿಯಾಲ್, ಹಿರಿಯಣ್ಣ, ಬಿ. ನರಸಿಂಹಮೂರ್ತಿ, ದಿನೇಶ್ ಪುತ್ರನ್, ಮಹಾಬಲ ಕುಂದರ್, ನೀರೆ ಕೃಷ್ಣ ಶೆಟ್ಟಿ, ಶಬೀರ್ ಅಹ್ಮದ, ರಮೇಶ್ ಕಾಂಚನ್, ವೈ ಸುಕುಮಾರ್, ಗೋಪಿನಾಥ್ ಭಟ್, ಶುಭದ ರಾವ್ ಕಾರ್ಕಳ, ಮಮತಾ ಶೆಟ್ಟಿ, ಕೀರ್ತಿ ಶೆಟ್ಟಿ, ಸರಸು ಬಂಗೇರ, ರೋಶನಿ ಒಲಿವರ, ಡಾ| ಸುನಿತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಗೋಪಿ ನಾಯ್ಕ, ಸಂಧ್ಯಾ ತಿಲಕ್, ಸುರೇಶ್ ಶೆಟ್ಟಿ ಬನ್ನಂಜೆ, ಇಸ್ಮಾಯಿಲ್ ಅತ್ರಾಡಿ, ಗಣೇಶ್ ನೆರ್ಗಿ ಮುಂತಾದವರು ಇದ್ದರುˌ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಾಸುದೇವ ಯಡಿಯಾಳ್ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರ್ ವಂದಿಸಿದರು.