ಪೊನ್ನಂಪೇಟೆ: ಎಐಸಿಸಿ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನದ ಭಾಗವಾಗಿ, ಎಐಸಿಸಿ ಹಾಗೂ ಕೆಪಿಸಿಸಿ ವೀಕ್ಷಕರ ಸಮ್ಮುಖದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮುಖಂಡರ ಸಭೆ ನಡೆಯಿತು.ಗೋಣಿಕೊಪ್ಪದಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಎಐಸಿಸಿ ವೀಕ್ಷಕರ ಹಾಗೂ ಕೋಝಿಕ್ಕೋಡ್ ಜಿಲ್ಲೆಯ ನಾದಾಪುರ ತಾಲೂಕಿನ ಶಾಸಕ ಅಭಿಜಿತ್ ಅವರು ವಹಿಸಿದ್ದರು.

ಕೆಪಿಸಿಸಿ ವೀಕ್ಷಕರಾದ ಆರ್.ವಿ. ವೆಂಕಟೇಶ್, ಪದ್ಮನಾಭ, ಮಮತಾ ಗಟ್ಟಿ ಹಾಗೂ ಲಾವಣ್ಯ ಬಳ್ಳಾಲ್‌, ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್ ಮತ್ತಿತರರು ಉಪಸ್ಥಿತರಿದ್ದರು.ರಾಜ್ಯ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲೆಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು / ಪದಾಧಿಕಾರಿಗಳು ವಿವಿಧ ಪದಾಧಿಕಾರಿಗಳು ಹಾಜರಿದ್ದರು.