ಹಾಸನ ನಗರದ ಹೊರವಲಯದ ಗವೇನಹಳ್ಳಿ, ಬುಸ್ತೇನಹಳ್ಳಿ ,ಕಸ್ತೂರವಳ್ಳಿ, ಬೊಮ್ಮನಾಯಕನಹಳ್ಳಿ, ರಾಜಘಟ್ಟ, ದೊಡ್ಡಹೊನ್ನೇನಹಳ್ಳಿ, ಕಾಚನಾಯಕನಹಳ್ಳಿ, ದೊಡ್ಡಬಸವನಹಳ್ಳಿ ಗ್ರಾಮಗಳ ಭೂಮಿಯನ್ನು 2007ರಲ್ಲಿ ಕೈಗಾರಿಕಾ ಅಭೀವೃದ್ಧಿ ಪ್ರದೇಶಕ್ಕಾಗಿ ವಶಪಡಿಸಿಕೊಳ್ಳಲಾಗಿದೆ. ಆದರೆ, ಈವರೆಗೆ ಪರಿಹಾರ ನೀಡಿಲ್ಲ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಈ ಮಧ್ಯೆ ಅದೇ ಭೂಮಿಯಲ್ಲಿ ಜೆಡಿಎಸ್ ಪಕ್ಷದವರು ಜನವರಿ 24ರಂದು ಸಮಾವೇಶ ಮಾಡಲು ಮುಂದಾಗಿದ್ದಾರೆ. ರೈತರು ಆ ಭೂಮಿಯಲ್ಲಿ ಬೆಳೆದ ಬೆಳೆಗಳನ್ನು ನಾಶ ಮಾಡಿದ್ದಾರೆ. ಹಾಗಾಗಿ ಆ ಜಾಗದಲ್ಲಿ ಸಮಾವೇಶಕ್ಕೆ ಅವಕಾಶ ಕೊಡಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹಾಸನ
ಕೈಗಾರಿಕಾ ಅಭಿವೃದ್ಧಿ ಪ್ರದೇಶಕ್ಕಾಗಿ ವಶಪಡಿಸಿಕೊಳ್ಳಲಾಗಿರುವ ರೈತರ ಭೂಮಿಗೆ ಇನ್ನೂ ಪರಿಹಾರ ನೀಡಿಲ್ಲ. ಆಗಲೇ ಆ ಭೂಮಿಯಲ್ಲಿ ಜೆಡಿಎಸ್ ಸಮಾವೇಶ ನಡೆಸಲು ಮುಂದಾಗಿದ್ದು, ಇದಕ್ಕೆ ಅವಕಾಶ ಕೊಡಬಾರದೆಂದು ಭೂಮಿ ಕಳೆದುಕೊಂಡ ರೈತರೊಡಗೂಡಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ವಕೀಲ ದೇವರಾಜೇಗೌಡರು ಶುಕ್ರವಾರ ಜಿಲ್ಲಾ ಕೈಗಾರಿಕಾ ಅಧಿಕಾರಿಗೆ ದೂರು ನೀಡಿದ್ದಾರೆ.ಹಾಸನ ನಗರದ ಹೊರವಲಯದ ಗವೇನಹಳ್ಳಿ, ಬುಸ್ತೇನಹಳ್ಳಿ ,ಕಸ್ತೂರವಳ್ಳಿ, ಬೊಮ್ಮನಾಯಕನಹಳ್ಳಿ, ರಾಜಘಟ್ಟ, ದೊಡ್ಡಹೊನ್ನೇನಹಳ್ಳಿ, ಕಾಚನಾಯಕನಹಳ್ಳಿ, ದೊಡ್ಡಬಸವನಹಳ್ಳಿ ಗ್ರಾಮಗಳ ಭೂಮಿಯನ್ನು 2007ರಲ್ಲಿ ಕೈಗಾರಿಕಾ ಅಭೀವೃದ್ಧಿ ಪ್ರದೇಶಕ್ಕಾಗಿ ವಶಪಡಿಸಿಕೊಳ್ಳಲಾಗಿದೆ. ಆದರೆ, ಈವರೆಗೆ ಪರಿಹಾರ ನೀಡಿಲ್ಲ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಆದರೂ ರೈತರಿಗೆ ಪರಿಹಾರ ನೀಡಿಲ್ಲ. ಈ ಮಧ್ಯೆ ಅದೇ ಭೂಮಿಯಲ್ಲಿ ಜೆಡಿಎಸ್ ಪಕ್ಷದವರು ಜನವರಿ 24ರಂದು ಸಮಾವೇಶ ಮಾಡಲು ಮುಂದಾಗಿದ್ದಾರೆ. ರೈತರು ಆ ಭೂಮಿಯಲ್ಲಿ ಬೆಳೆದ ಬೆಳೆಗಳನ್ನು ನಾಶ ಮಾಡಿದ್ದಾರೆ. ಹಾಗಾಗಿ ಆ ಜಾಗದಲ್ಲಿ ಸಮಾವೇಶಕ್ಕೆ ಅವಕಾಶ ಕೊಡಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ.