ಕಾಂಗ್ರೆಸ್‌ ಕಚೇರಿ ದೇವಸ್ಥಾನ ಇದ್ದಂತೆ: ಸಚಿವೆ ಹೆಬ್ಬಾಳ್ಕರ್‌

| Published : Nov 03 2025, 03:03 AM IST

ಕಾಂಗ್ರೆಸ್‌ ಕಚೇರಿ ದೇವಸ್ಥಾನ ಇದ್ದಂತೆ: ಸಚಿವೆ ಹೆಬ್ಬಾಳ್ಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಸಂಜೆ ಜಿಲ್ಲಾ ಉಸ್ತುವಾರಿ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಸಂಜೆ ಜಿಲ್ಲಾ ಉಸ್ತುವಾರಿ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು. ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ನಾವು ಸೋತಿರಬಹುದು. ಆದರೆ ಕಾರ್ಯಕರ್ತರು ನಮ್ಮೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಕಚೇರಿ ಎಂದರೆ ನಮಗೆ ದೇವಸ್ಥಾನವಿದ್ದಂತೆ. ಇಲ್ಲಿಗೆ ಬರುವುದೆಂದರೆ ದೇವಸ್ಥಾನಕ್ಕೆ ಬಂದಂತೆ ಖುಷಿ ಇರುತ್ತದೆ ಎಂದರು.

ಭಾರತ ದೇಶದ ಅಖಂಡತೆಗೆ, ಭದ್ರತೆಗೆ ಸಾಕಷ್ಟು ಕೊಡುಗೆ ನೀಡಿದವರು ಸರ್ದಾರ್ ವಲ್ಲಭಬಾಯಿ ಪಟೇಲ್. ಅವರ ವ್ಯಕ್ತಿತ್ವ, ವಿಚಾರಧಾರೆ ಎಂದಿಗೂ ಶಾಶ್ವತ. ಈ ಇಬ್ಬರು ಮಹಾನ್ ನಾಯಕರು ನಮ್ಮ ಪಕ್ಷದೊಳಗಿದ್ದು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ ಎಂದರು.

ವಂಡ್ಸೆ ಬ್ಲಾಕ್‌ ಕಾಂಗ್ರೆಸ್ ಕಚೇರಿಗೆ ಮೊದಲ‌ ಬಾರಿಗೆ ಆಗಮಿಸಿದ ಅವರನ್ನು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಸನ್ಮಾನಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ರಾಜು ಪೂಜಾರಿ, ಬಾಬು ಹೆಗ್ಡೆ ತಗ್ಗರ್ಸೆ, ಕೆರಾಡಿ ಪ್ರಸನ್ನ ಶೆಟ್ಟಿ, ರಾಜೇಶ್ ಕಾರಂತ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶರತ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ, ಉದಯ್ ಪೂಜಾರಿ, ಜಿ.ಪಂ‌ ಮಾಜಿ ಸದಸ್ಯರಾದ ಜ್ಯೋತಿ ಪುತ್ರನ್, ಜ್ಯೋತಿ ಅಚ್ಚುತ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.