ಸಾರಾಂಶ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ರಾಮನಗರದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು.
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ರಾಮನಗರದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು.
ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ ಮುನ್ನಡೆ ಸಾಧಿಸಿದ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ಸಿಗರಲ್ಲಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸಿತು. ಮಧ್ಯಾಹ್ನದ ವೇಳೆಗೆ ಮಂಜುನಾಥ್ ರವರ ಮತಗಳ ಅಂತರ ಒಂದೂವರೆ ಲಕ್ಷದ ಗಡಿ ದಾಟಿದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಬೇಸರಗೊಂಡರು. ಯಾರೂ ಮತ ಎಣಿಕೆ ಕೇಂದ್ರದತ್ತ ಆಗಮಿಸಲೇ ಇಲ್ಲ.
ಚುನಾವಣೆ ಕಾರಣದಿಂದ ಸದಾ ಕಾರ್ಯಕರ್ತರಿಂದ ತುಂಬಿರುತ್ತಿದ್ದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು. ಕಚೇರಿ ಬಳಿ ಯಾವೊಬ್ಬ ಮುಖಂಡರು ಇರಲಿಲ್ಲ. ಸುರೇಶ್ ಪರಾಭವಗೊಂಡಿದ್ದು ಕೈ ಪಡೆಯಲ್ಲಿ ನೋವಿನ ಛಾಯೆ ಆವರಿಸುವಂತೆ ಮಾಡಿತು.