ಸೋಲಿನ ಭೀತಿಯಿಂದ ಕಾಂಗ್ರೆಸ್ ದಬ್ಬಾಳಿಕೆ: ರಾಜೂಗೌಡ

| Published : May 04 2024, 12:32 AM IST

ಸೋಲಿನ ಭೀತಿಯಿಂದ ಕಾಂಗ್ರೆಸ್ ದಬ್ಬಾಳಿಕೆ: ರಾಜೂಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಹುಣಸಗಿಯ ರಾಯನಪಾಳ್ಯದಲ್ಲಿ ದುರುದ್ದೇಶ ಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮಾಜಿ ಸಚಿವ ಆರೋಪ ಮಾಡಿದರು. ಗಾಯಗೊಂಡ ಕಾರ್ಯಕರ್ತರ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಆರೋಗ್ಯ ವಿಚಾರಿಸಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್‌ನವರು ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಹೇಳಿದರು.

ಪಟ್ಟಣದ ಪೊಲೀಸ್ ಠಾಣಾ ಸಿಪಿಐ ವೃತ್ತದ ಆವರಣದಲ್ಲಿ ಎಸ್‌ಪಿ ಅವರನ್ನು ಭೇಟಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಲಕ್ಷಣ ಕಂಡು ಕಾಂಗ್ರೆಸ್‌ನವರಿಗೆ ನಡುಕ ಶುರುವಾಗಿದೆ. ಹೀಗಾಗಿ ಏನಾದರೂ ತಂತ್ರಗಾರಿಕೆ ಮಾಡಬೇಕೆಂದು ದುರುದ್ದೇಶ ಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಗುರುವಾರ ರಾತ್ರಿ ರಾಯನಪಾಳ್ಯ ಗ್ರಾಮದಲ್ಲಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಕಾರ್ಯಕರ್ತರ ದಬ್ಬಾಳಿಕೆಗೆ ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿ ಸ್ಥಳೀಯ ರಾಜನಕೋಳೂರು ಗ್ರಾಮದ ಸರಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ ಇದೆ. ನಾವು ಕೂಡ ಸಂವಿಧಾನ ಹಾಗೂ ಕಾನೂನು ತಿಳಿದುಕೊಂಡಿದ್ದೇವೆ. ಇನ್ನೊಬ್ಬರ ಮೇಲೆ ದಬ್ಬಾಳಿಕೆ ಮಾಡಿಸುವ ಜಾಯಮಾನ ನಮ್ಮದಲ್ಲ. ಚುನಾವಣೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ಪೊಲೀಸ್ ಇಲಾಖೆ ಕಾಪಾಡಬೇಕು ಎಂದರು.ಕಲ್ಲು ತೂರಾಟ ಪ್ರಕರಣ: 7 ಜನರ ಬಂಧನ

ತಾಲೂಕಿನ ರಾಯನಪಾಳ್ಯ ಗ್ರಾಮದಲ್ಲಿ ನಡೆದ ಘರ್ಷಣೆ ಪ್ರಕರಣದಲ್ಲಿ ಪೊಲೀಸರು 7 ಜನರನ್ನು ಬಂಧಿಸಿದ್ದಾರೆ.

ಇದಕ್ಕೂ ಮುನ್ನ, ಈ ಏಳು ಜನರನ್ನು ಹಾಗೂ ಕೆಲವು ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗುತ್ತಿದ್ದಾಗ, ಅಲ್ಲಿಗಾಗಮಿಸಿದ ಮಾಜಿ ಸಚಿವ ರಾಜೂಗೌಡ ಅವರು, ಕಾಲೇಜು ವಿದ್ಯಾರ್ಥಿಗಳನ್ನು ಹೇಗೆ ಬಂಧಿಸುತ್ತೀರಿ ಎಂದು ಪೊಲೀಸರ ಪ್ರಶ್ನಿಸಿ, ಪೊಲೀಸ್‌ ವಾಹನದ ಕೆಳಗೆ ಮಲಗಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಬಿಟ್ಟು ಉಳಿದ 7 ಜನರನ್ನು ಬಂಧಿಸಲಾಗಿದೆ ಪೊಲೀಸ್ ಮೂಲಗಳು ತಿಳಿಸಿವೆ. ಯಾದಗಿರಿ ಜಿಲ್ಲಾ ಎಸ್ಪಿ ಭೇಟಿ ಪರಿಶೀಲನೆ: ಹುಣಸಗಿ ತಾಲೂಕಿನ ರಾಯನಪಾಳ್ಯದಲ್ಲಿ ಘರ್ಷಣೆ ಘಟನೆ ಕುರಿತು ಎಸ್ಪಿ ಜಿ. ಸಂಗೀತಾ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯ 61 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಕೆಎಸ್‌ಆರ್‌ಪಿ ಪಡೆ ಬಿಡಲಾಗಿದೆ. ಜಿಲ್ಲಾಡಳಿತವು ಕೂಡ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.