ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಆಕ್ರೋಶ

| Published : Aug 20 2024, 01:04 AM IST

ಸಾರಾಂಶ

ದಾಬಸ್‌ಪೇಟೆ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ವಿರುದ್ಧ ದ್ವೇಷದ ರಾಜಕಾರಣಕ್ಕೆ ಬೆಂಬಲಿಸುತ್ತಿದ್ದಾರೆ ಎಂದು ಸೋಂಪುರ ಹೋಬಳಿ ಮುಖಂಡ ಅಗಳಕುಪ್ಪೆ ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.

ದಾಬಸ್‌ಪೇಟೆ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ವಿರುದ್ಧ ದ್ವೇಷದ ರಾಜಕಾರಣಕ್ಕೆ ಬೆಂಬಲಿಸುತ್ತಿದ್ದಾರೆ ಎಂದು ಸೋಂಪುರ ಹೋಬಳಿ ಮುಖಂಡ ಅಗಳಕುಪ್ಪೆ ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಸಮೀಪ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಹೊರಡುವ ಮುನ್ನ ಮಾತನಾಡಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಅನ್ಯಮಾರ್ಗದಿಂದ ಆಡಳಿತಕ್ಕೆ ಬರಲು ಬಿಜೆಪಿ ಪಕ್ಷದವರು ಮಾಡುತ್ತಿರುವ ಕುತಂತ್ರ ಕೆಲಸವಾಗಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ನಡೆದ ಭ್ರಷ್ಟಾಚಾರದ ಬಗ್ಗೆಯೂ ರಾಜ್ಯಪಾಲರು ಕ್ರಮ ಕೈಗೊಳ್ಳುವರಾ ಎಂದು ಪ್ರಶ್ನಿಸಿದರು. ರಾಜ್ಯಪಾಲರ ನಡೆ ಖಂಡನೀಯವಾಗಿದ್ದು ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಮಾತನಾಡಿ, ಸಿಎಂ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆನೀಡಿದ್ದು ನಮ್ಮ ಶಾಸಕರಾದ ಎನ್.ಶ್ರೀನಿವಾಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆಗೆ ಮಾಡಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಯೋಗಾನಂದೀಶ್, ಪಾರ್ಥರಾಜು, ವೀರಸಾಗರ ಗಂಗರುದ್ರಯ್ಯ,ಸಿದ್ದರಾಜು, ಲಕ್ಕೂರು ಸಿದ್ದರಾಜು, ದಿನೇಶ್ ನಾಯಕ್, ಕೆಂಗಲ್ ರವಿಕುಮಾರ್, ಬಿ.ಟಿ. ರಾಮಚಂದ್ರ, ಗೋಪಿವರ್ಮ ಇತರರಿದ್ದರು.