ಬಿಪಿಎಲ್ ಪಡಿತರ ಚೀಟಿ ರದ್ದು: ಕಾಂಗ್ರೆಸ್ ಆಕ್ರೋಶ

| Published : Sep 21 2025, 02:03 AM IST

ಸಾರಾಂಶ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆ ನೀಡಿ, ಶಾಸಕರಿಗೆ ನಿಜವಾಗಿಯೂ ಬಡಜನರ ಬಗ್ಗೆ ಕಾಳಜಿ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುವ ಬದಲು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದಲ್ಲಿ 7.76 ಲಕ್ಷ ಶಂಕಾಸ್ಪದ ಪಡಿತರ ಚೀಟಿಗಳನ್ನು ಗುರುತಿಸಿ, ಅದರಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಈ ತಿಂಗಳ 30ರೊಳಗಾಗಿ ರದ್ದುಗೊಳಿಸುವಂತೆ ಸೂಚನೆ ನೀಡಿರುವುದು ಬಡಜನರ ವಿರೋಧಿ ಧೋರಣೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆ ನೀಡಿ, ಶಾಸಕರಿಗೆ ನಿಜವಾಗಿಯೂ ಬಡಜನರ ಬಗ್ಗೆ ಕಾಳಜಿ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುವ ಬದಲು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಸವಾಲು ಹಾಕಿದರು.

ಕೆಲವು ತಿಂಗಳ ಹಿಂದೆ ಕಾರ್ಕಳದಲ್ಲಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿದೆ ಎಂದು ಜನರಲ್ಲಿ ಭಯ ಹುಟ್ಟಿಸಿದರೆ, ಈಗ ಕೇಂದ್ರ ಸರ್ಕಾರದ ಸೂಚನೆ ಶಾಸಕರ ಸುಳ್ಳನ್ನು ಬಹಿರಂಗಪಡಿಸಿದೆ ಎಂದರು.

ಬಡ ಜನರ ಹಿತಾಸಕ್ತಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವ ಯಾವುದೇ ಉದ್ದೇಶ ರಾಜ್ಯ ಸರ್ಕಾರ ಹೊಂದಿಲ್ಲ. ಕೇಂದ್ರದ ಜನವಿರೋಧಿ ನಿರ್ಧಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಶುಭದರಾವ್ ಸ್ಪಷ್ಟಪಡಿಸಿದರು.