ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ

| Published : Apr 02 2025, 01:01 AM IST

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದರು.ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ. ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಹೊರೆ ಮಾಡಿದೆ. ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ. ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜನವಾಗಲಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದ್ಯಾ? ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಕುಟುಕಿದರು.ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ದೂರಿದರು.ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದರು.