ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷದ ‘ವೋಟ್ ಚೋರ್ ಗದ್ದಿ ಛೋಡ್’ ಅಭಿಯಾನ

| Published : Oct 29 2025, 11:00 PM IST

ಸಾರಾಂಶ

ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವೋಟ್ ಚೋರ್ ಗದ್ದಿ ಛೋಡ್ ಅಭಿಯಾನ ಮಂಗಳವಾರ ನಡೆಯಿತು.

ಉಡುಪಿ: ದೇಶದಾದ್ಯಂತ ನಡೆದಂತೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿಯೂ ವೋಟ್ ಚೋರಿ ನಡೆದಿದೆ ಎಂದು ಉಡುಪಿ ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಆರೋಪಿಸಿದ್ದಾರೆ.ಅವರು ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವೋಟ್ ಚೋರ್ ಗದ್ದಿ ಛೋಡ್ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಈ ಹಿಂದೆ ಉಡುಪಿಯ ಇತಿಹಾಸದಲ್ಲಿಯೇ ಶೇ. 82ಕ್ಕಿಂತ ಹೆಚ್ಚು ಮತದಾನವಾಗಿಲ್ಲ, ಆದರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ಶೇ. 92ರಷ್ಟು ಮತದಾನವಾಗಿದೆ, ಈ ಶೇ. 10 ಮತಗಳು ಎಲ್ಲಿಂದ ಬಂದವು ಎಂಬುದನ್ನು ಬಿಜೆಪಿ ಶಾಸಕರು ತಿಳಿಸಬೇಕು ಎಂದು ಆಗ್ರಹಿಸಿದರು.ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ವೋಟ್ ಚೋರಿ ವಿರುದ್ಧ 50 ಸಾವಿರ ಸಹಿ ಸಂಗ್ರಹಿಸಿ ಎಐಸಿಸಿ ಮೂಲಕ ಸುಪ್ರೀಂ ಕೋರ್ಟಿಗೆ ಸಲ್ಲಿಸಲಾಗುತ್ತದೆ. ಮೋಸದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೊಲಗುವರೆಗೆ ಹೋರಾಟ ನಡೆಯಲಿದೆ ಎಂದರು.

ಈ ಸಹಿ ಸಂಗ್ರಹ ಅಭಿಯಾನದಲ್ಲಿ ಉಡುಪಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಪಕ್ಷದ ಪ್ರಮುಖರಾದ ವೆರೋನಿಕಾ ಕರ್ನೆಲಿಯೋ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಫಾದರ್ ವಿಲಿಯಂ ಮಾರ್ಟಿಸ್, ಭುಜಂಗ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.