ಸಾರಾಂಶ
ಕಾಶ್ಮೀರದಲ್ಲಿ ನಡೆದ ಭಯೋತ್ಪಾಕರ ದಾಳಿಯಿಂದ ಸಾವನಪ್ಪಿದ ಪ್ರವಾಸಿಗರಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮೃತರಿಗೆ ಅಂತಿಮ ನಮನ । ಕೊಲ್ಲುವವರಿಗೆ ಧರ್ಮವೇ ಇಲ್ಲ: ಕೈ ಮುಖಂಡ
ಕನ್ನಡಪ್ರಭ ವಾರ್ತೆ ಶಿವಮೊಗ್ಗಕಾಶ್ಮೀರದಲ್ಲಿ ನಡೆದ ಭಯೋತ್ಪಾಕರ ದಾಳಿಯಿಂದ ಸಾವನಪ್ಪಿದ ಪ್ರವಾಸಿಗರಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಶ್ಮೀರದಲ್ಲಿ ನಡೆದಿರುವ ಘಟನೆ ಅಮಾನವೀಯವಾಗಿದ್ದು, ಇಡೀ ಮನುಕುಲವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಯಾವ ಧರ್ಮಗಳೂ ಕೊಲ್ಲಲು ಹೇಳುವುದಿಲ್ಲ. ಕೊಲ್ಲುವವರಿಗೆ ಧರ್ಮವೇ ಇಲ್ಲ. ಮಾನವ ಸಮಾಜ ತಲೆತಗ್ಗಿಸುವಂತಹ ಹೇಯಕೃತ್ಯವಿದು. ಶಿವಮೊಗ್ಗದ ಮಂಜುನಾಥ್ ಕೂಡ ಬಲಿಯಾಗಿದ್ದಾರೆ. ಈ ಕುಟುಂಬದ ಜೊತೆ ನಾವಿರುತ್ತೇವೆ ಎಂದರು.ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೇಶ್ ಮಾತನಾಡಿ, ಭಾರತವನ್ನು ಉಗ್ರರಿಂದ ರಕ್ಷಿಸಬೇಕಾಗಿದೆ. ಈ ಕೃತ್ಯ ಎಸಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು. ಉಗ್ರರ ದಾಳಿಯಿಂದ ಜನ ಸತ್ತ ಮೇಲೆ ‘ನಾವು ಬಿಡುವುದಿಲ್ಲ’ ಎಂದು ಕೇಂದ್ರ ಸರಕಾರ ಹೇಳಿಕೆ ನೀಡುವುದರಲ್ಲಿ ಯಾವುದೇ ಅರ್ಥ ಇಲ್ಲ ಎಂದರು.
ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್ ರಮೇಶ್, ಪಾಲಿಕೆ ಮಾಜಿ ಸದಸ್ಯ ರಮೇಶ್ ಹೆಗಡೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಮಧುಸೂದನ್, ಚೇತನ್, ಅಕ್ಬರ್,ಇಮ್ರಾನ್, ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್, ಬಾಲಾಜಿ, ಪ್ರವೀಣ್, ಶಿವಕುಮಾರ್, ಸಕ್ಲೇನ್,ಅಬ್ದುಲ್ ಸತ್ತಾರ್,ಧನುಷ್, ಅನಿಲ್ ಪಾಟೀಲ್ ಅಶೋಕ್ ಮತ್ತಿತರರು ಇದ್ದರು.