ಸಾರಾಂಶ
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆ ರೀತಿಯ ನಿಲುವುಗಳಿವೆ ಹಾಗೂ ಅದರಲ್ಲಿ ಸ್ವಾರ್ಥ ರಾಜಕಾರಣ ಅಡಗಿದೆ. ಕಾಂಗ್ರೆಸ್‌ನಲ್ಲಿ ಕರ್ನಾಟಕಕ್ಕೆ ಒಂದು ನೀತಿ, ಕೇರಳಕ್ಕೆ ಮತ್ತೊಂದು ನೀತಿ. ಅದರ ಉದ್ದೇಶ ಲೋಕಸಭೆ ಚುನಾವಣೆ ಮಾತ್ರ ಆಗಿದೆ. ‘ರಾವಣ ತಲೆಗಳ ಕಾಂಗ್ರೆಸ್ ರಾಜಕಾರಣʼ ಎಂದು ಲೇವಡಿ ಮಾಡಿದ್ದಾರೆ.===ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ‘ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ’ ಎಂದು ಕರೆದರೆ, ಕೇರಳ ಕಾಂಗ್ರೆಸ್ಸಿಗರು ಅಸಹಕಾರ ವ್ಯಕ್ತಪಡಿಸಿದ್ದಾರೆ. ‘ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ’ ಎಂದಿದ್ದಾರೆ. ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರ್ಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರು ಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರ ಬಗ್ಗೆ ಲಘುವಾಗಿ ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ ಎಂದು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥ ವೈರುಧ್ಯ, ಇದೆಂಥ ಚೋದ್ಯ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))