ವಿನಯ್ ಗಾಂಧಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ

| Published : Jun 12 2024, 12:37 AM IST

ವಿನಯ್ ಗಾಂಧಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ವಿನಯ್ ಗಾಂಧಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್‌ನಿಂದ ಪ್ರತಿಭಟನಾ ಮೆರವಣಿಗೆ । ರಾಜಣ್ಣಗೆ ಜಿ. ಉಸ್ತುವಾರಿ ಮಾಡಲು ಕೈ ಒತ್ತಾಯ । ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಕನ್ನಡಪ್ರಭ ವಾರ್ತೆ ಹಾಸನ

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರ ಹಿತಾದೃಷ್ಟಿಯಲ್ಲಿ ದೇವೇಗೌಡರ ಕುಟುಂಬದ ವಿರುದ್ಧ ನೇರವಾಗಿ ಹೋರಾಟ ಮಾಡಕೊಂಡು ಬರುತ್ತಿರುವ ಪಕ್ಷದ ವಿನಯ್ ಗಾಂಧಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಈ ವೇಳೆ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿ, ‘ಸಾಮಾಜಿಕ ನ್ಯಾಯಕ್ಕೋಸ್ಕರ ಹಾಸನ ಲೋಕಸಭೆಯಲ್ಲಿ ೮ ವಿಧಾನಸಭಾ ಕ್ಷೇತ್ರದಲ್ಲಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಮನವಿ ಲೋಕಸಭೆಯಲ್ಲಿ ಒಂದು ವಿಧಾಸಭಾ ಟಿಕೆಟ್‌ನ್ನು ಲಿಂಗಾಯತರಿಗೆ ನೀಡಬೇಕಾಗಿದೆ. ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ, ದಾಸ ಒಕ್ಕಲಿಗರಿಗೆ, ಮುಸಲ್ಮಾನರು, ಕ್ರಿಶ್ಚಿಯನ್ನರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ನೀಡಬೇಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಲ್ಲಿ ಮನವಿ ಮಾಡುತ್ತೇವೆ’ ಎಂದು ಹೇಳಿದರು.

‘ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ೩೦ ವರ್ಷಗಳಿಂದ ಕಾಂಗ್ರೆಸ್ ಶಾಸಕರಿಲ್ಲದೆ ಕಾಂಗ್ರೆಸ್ ಮೇಲೆ. ಜೆಡಿಎಸ್ ಪಕ್ಷದ ಕಾರ್ಯಕರ್ತರ ದಬ್ಬಾಳಿಕೆ, ದೌರ್ಜನ್ಯ, ಸಾವು, ನೋವು, ಹಲವಾರು ರೈತರ ಜಮೀನುಗಳನ್ನು ಹಾನಿಮಾಡಿ ಹಲವಾರು ಮನೆಗಳನ್ನು ಜಖಂಗೊಳಿಸಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರ ಕೈ-ಕಾಲುಗಳನ್ನು ಕತ್ತರಿಸಿ ಕಾಂಗ್ರೆಸ್‌ನ ಕೆಲವು ಮುಖಂಡರನ್ನು ಜಾತಿ ವೈಷಮ್ಯದಿಂದ ಕೊಲೆಮಾಡಿರುತ್ತಾರೆ’ ಎಂದು ದೂರಿದರು.

‘ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಶಾಸಕರಿಲ್ಲದೇ ತಬ್ಬಲಿಯಾಗಿರುತ್ತಾರೆ, ವಿನಯ ಗಾಂಧಿಯವರು ಯಾವುದೇ ಸರ್ಕಾರದ ನಾಮಿನೇಷನ್ ಅಧಿಕಾರ ಇಲ್ಲದಿದ್ದರೂ ಸುಮಾರು ೪೫ ವರ್ಷದಿಂದ ಹಾಸನ ಕ್ಷೇತ್ರದ ಜನರ ಕುಂದುಕೊರತೆಗಳಿಗೆ ಸ್ಪಂದಿಸುತ್ತ ಬಂದಿರುತ್ತಾರೆ. ಹಾಸನ ವಿಧಾನಸಭಾ ಕ್ಷೇತ್ರದ ಸ್ಥಳೀಯ ವಿನಯ ಗಾಂಧಿಯವರಿಗೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಿದರೆ ಮುಂದೆ ಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಭಾರಿ ಬಹುಮತದ ಅಂತರದಿಂದ ಗೆದ್ದು ಹಾಸನ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮತ ಬಾಂಧವರಿಗೆ ಶಕ್ತಿ ತುಂಬಲು ನೆರವಾಗಲ್ಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕೆ.ಎನ್.ರಾಜಣ್ಣನವರನ್ನು ಹಾಸನ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿದ ಮೇಲೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಲವು ಭಿನ್ನಾಭಿಪ್ರಾಯಕ್ಕೆ ಒಳಗೊಂಡಂತೆ ಗುಂಪು ಗುಂಪಾಗಿ ಹೋಗಿದ್ದರು. ನಂತರ ಕೆ.ಎನ್.ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಮೇಲೆ ಜಿಲ್ಲೆಯ ಎಲ್ಲಾ ಜನಾಂಗದ ಮುಖಂಡರು ಮತ್ತು ಎಲ್ಲಾ ಕಾರ್ಯಕರ್ತರನ್ನು ಒಟ್ಟುಗೂಡಿಸಿ ತಳಹಂತದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೇಯಸ್ ಪಾಟೇಲರನ್ನು ಬಹಳ ಮತಗಳ ಅಂತರದಿಂದ ಗೆಲ್ಲಿಸಲು ಕೆ.ಎನ್.ರಾಜಣ್ಣ ನೇತೃತ್ವದ ಶ್ರಮದಿಂದ ಸಾಧ್ಯವಾಗಿದೆ’ ಎಂದರು.

ಶೀಘ್ರದಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳು ಬರುತ್ತಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ೭ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರ ಹಿಡಿಯಲು ಅವರ ನೇತೃತ್ವದಲ್ಲಿ ಕಾರ್ಯಕರ್ತರು ಒಗ್ಗಟಾಗಿ ಪಕ್ಷದ ಗೆಲುವಿಗೆ ಶ್ರಮಿಸಬೇಕಾಗಿದೆ ಆದ್ದರಿಂದ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಲು ಮನವಿ ಮಾಡುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ವಿನಯ್ ಗಾಂಧಿ, ಕಡಾಖಡಿ ಫೀರ್ ಸಾಹೇಬ್, ಜಗದೀಶ್, ಆರ್.ವಿಜಯಕುಮಾರ್, ಪಂಕಜ, ಮಂಜೀರ್, ಮೆಹರುನ್ನಿಸಾ, ಮಂಜು ಇತರರು ಇದ್ದರು.