ಸಾರಾಂಶ
ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿ ಮುಂದೆ ಜಮಾಯಿಸಿ, ಇಂದಿರಾ ಗಾಂಧಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಬಿಜೆಪಿ ಮುಖಂಡರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ: ಬಿಜೆಪಿ ಮುಖಂಡರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಯುವ ಕಾರ್ಯಕರ್ತರು ನಗರದ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿ ಮುಂದೆ ಜಮಾಯಿಸಿ, ಇಂದಿರಾ ಗಾಂಧಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಬಿಜೆಪಿ ಮುಖಂಡರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿದರು. ಬ್ಯಾರಿಕೇಡ್ ಹತ್ತಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಹೈಡ್ರಾಮಾ ನಡೆಯಿತು. ಆಗ ಮಧ್ಯಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಪ ಹಳ್ಳೂರ, ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ, ಉಪಾಧ್ಯಕ್ಷ ಕಾಶಿಮ್ ಕೂಡಲಗಿ, ಸುಜಾವುದ್ದೀನ್ ವಾಚಮೇಕರ್, ಅರ್ಜುನ್ ಕತ್ರಿಮಾಲ್, ಶಾನು ಖಾನ್, ಪ್ರೇಮ್ ಜಾದವ್, ರಾಹುಲ್ ಬೆಲದೊಡಿ, ಸಲ್ಮಾನ್ ಹಳ್ಳೂರ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.